ಮಂಗಳವಾರ, ಏಪ್ರಿಲ್ 13, 2021
22 °C

ಲಿಂಗ ಸಮಾನತೆ, ಮಹಿಳಾ ಸಬಲೀಕರಣಕ್ಕೆ ಭಾರತ ಬದ್ಧ: ವಿಶ್ವಸಂಸ್ಥೆಯಲ್ಲಿ ಸ್ಮೃತಿ ಮಾತು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನ ಅವಕಾಶಗಳನ್ನು ಅನುಭವಿಸುವುದನ್ನು ಖಚಿತಪಡಿಸಲು ಲಿಂಗ ಸಮಾನತೆ ಮತ್ತು ಸಬಲೀಕರಣದ ಗುರಿಗಳತ್ತ ಮುನ್ನಡೆಯಲು ಭಾರತ ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಪುನರುಚ್ಚರಿಸಿದ್ದಾರೆ.

ಭಾರತದಲ್ಲಿನ ಮಹಿಳೆಯರ ಸ್ಥಿತಿಗತಿ ಕುರಿತು ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಮಾತನಾಡಿದ ಸ್ಮೃತಿ, ʼಕೋವಿಡ್‌ ಬಳಿಕ ಪ್ರಪಂಚದಾದ್ಯಂತ ಇರುವ ನಮ್ಮ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಹೆಚ್ಚು ನ್ಯಾಯಯುತ ಹಾಗೂ ಸಮಾನವಾದ ಜಗತ್ತನ್ನು ನಿರ್ಮಿಸಿಕೊಡಲು ಭಾರತವು ದೃಢವಾಡ ಬದ್ಧತೆಯನ್ನು ಹೊಂದಿದೆʼ ಎಂದು ಹೇಳಿದ್ದಾರೆ.

ಭಾರತವನ್ನು ಮಹಿಳೆಯರ ಅಭಿವೃದ್ಧಿ ಮಾದರಿಯಿಂದ, ಮಹಿಳೆಯರ ನೇತೃತ್ವದ ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ʼಆತ್ಮನಿರ್ಭರ ಭಾರತʼ ಮಹತ್ವಾಕಾಂಕ್ಷೆಯನ್ನು ಮನಗಂಡಂತೆ, ದೇಶದ ಎಲ್ಲ ಪ್ರಯತ್ನಗಳಲ್ಲಿ ಮಹಿಳಾ ಸಂಸ್ಥೆಗಳು ಮತ್ತು ನಾಯಕತ್ವವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

'ನಾವು ಭಾರತದಲ್ಲಿ ಮಹಿಳೆಯರನ್ನು ಗಮನದಲ್ಲಿರಿಸಿ ಆರ್ಥಿಕ ಚಟುವಟಿಕೆಗಳು, ಉದ್ಯೋಗ ಮತ್ತು ಸ್ವ-ಉದ್ಯೋಗಾವಕಾಶಗಳು, ಆರೋಗ್ಯ ರಕ್ಷಣೆ, ಪೋಷಣೆ, ಸುರಕ್ಷತೆ, ಭದ್ರತೆ ಮತ್ತು ಶಿಕ್ಷಣ ಸೌಲಭ್ಯಗಳನ್ನು ಗಮನಾರ್ಹವಾಗಿ ವಿಸ್ತರಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಸರಣಿ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದೇವೆʼ ಎಂದು ತಿಳಿಸಿದ್ದಾರೆ.

ʼಸ್ಥಳೀಯ ಆಡಳಿತದಲ್ಲಿ ನೀಡಿರುವ ಮೀಸಲಾಯಿತಿಂದಾಗಿ 13.7 ಲಕ್ಷಕ್ಕೂ ಹೆಚ್ಚು ಚುನಾಯಿತ ಮಹಿಳಾ ಪ್ರತಿನಿಧಿಗಳು ಸಮುದಾಯ ಮಟ್ಟದಲ್ಲಿ ಲಿಂಗ ಸಂವೇದನಾಶೀಲ ಸಾರ್ವಜನಿಕ ನೀತಿಗಳನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ನಾಯಕತ್ವವನ್ನು ವಹಿಸಿಕೊಂಡಿದ್ದಾರೆʼ ಎಂಬುದನ್ನು ಉಲ್ಲೇಖಿಸಿದ್ದಾರೆ.

ʼಪ್ರಧಾನಮಂತ್ರಿ ಜನಧನ್‌ ಯೋಜನೆಯ ಮೂಲಕ ನಮ್ಮ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬರೋಬ್ಬರಿ 2.20 ಕೋಟಿಗೂ ಹೆಚ್ಚು ಮಹಿಳೆಯರನ್ನು ಬ್ಯಾಂಕಿಂಗ್‌ ವ್ಯವಸ್ಥೆಗೆ ಕರೆತಂದಿರುವುದು ಬಹಳ ಸಂತೋಷದ ಸಂಗತಿʼ ಎಂದು ಒತ್ತಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು