ಶುಕ್ರವಾರ, ಮೇ 14, 2021
32 °C

ಅಮೆರಿಕ ವಿಶ್ವವಿದ್ಯಾಲಯಗಳ ಜತೆ ಸಹಭಾಗಿತ್ವಕ್ಕೆ ಮುಂದಾದ ಭಾರತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕದ ವಿಶ್ವವಿದ್ಯಾಲಯಗಳ ಜತೆ ಸಹಭಾಗಿತ್ವ ಹೊಂದುವ ನಿಟ್ಟಿನಲ್ಲಿ ಭಾರತ ಪ್ರಯತ್ನ ಆರಂಭಿಸಿದೆ.

ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ಗಣಿತ ವಿಷಯಗಳ ಅಧ್ಯಯನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತದ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳುತ್ತಾರೆ. ಹೀಗಾಗಿ, ಅಮೆರಿಕದ ವಿಶ್ವವಿದ್ಯಾಲಯಗಳನ್ನು ‘ಜ್ಞಾನದ ಸಹಭಾಗಿತ್ವ’ ಯೋಜನೆಯಲ್ಲಿ ಸೇರಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಅಮೆರಿಕದಲ್ಲಿರುವ ಭಾರತದ ರಾಯಭಾರಿ ತಾರಾಂಜಿತ್‌ ಸಿಂಗ್‌ ಸಂಧು ಅವರು ಈಗಾಗಲೇ ಅಮೆರಿಕದ ವಿಶ್ವವಿದ್ಯಾಲಯಗಳ ಜತೆ ಸಮಾಲೋಚನೆ ನಡೆಸಿದ್ದಾರೆ.

‘ಅಮೆರಿಕದಲ್ಲಿ ಭಾರತದ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳಿದ್ದಾರೆ. ಇವರೆಲ್ಲರೂ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ಗಣಿತ ವಿಷಯಗಳ ಅಧ್ಯಯನದಲ್ಲಿ ತೊಡಗಿದ್ದಾರೆ. ಹೀಗಾಗಿ, ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ವಿಪುಲ ಅವಕಾಶಗಳಿವೆ’ ಎಂದು ಸಂಧು ಅವರು ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ವಿನಿಮಯ, ಆನ್‌ಲೈನ್‌ ಶಿಕ್ಷಣ,  ವಿಶ್ವವಿದ್ಯಾಲಯಗಳ ನಡುವೆ ಒಪ್ಪಂದ ಮುಂತಾದ ಕ್ರಮಗಳನ್ನು ಕೈಗೊಳ್ಳಬಹುದು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಅರಿಜೊನಾ ಸ್ಟೇಟ್‌ ಯುನಿವರ್ಸಿಟಿ’ ಮತ್ತು ‘ಹಾವರ್ಡ್‌ ಯುನಿವರ್ಸಿಟಿ’  ಅಧಿಕಾರಿಗಳ ಜತೆ ಭಾರತದ ಹಿರಿಯ ರಾಜತಾಂತ್ರಿಕರು ಈ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು