ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾಕ್ಕೆ ಸೈನ್ಯ ರವಾನೆ: ವರದಿ ಅಲ್ಲಗಳೆದ ಭಾರತ ಹೈಕಮಿಷನ್‌

‘ಭಾರತ ಶ್ರೀಲಂಕಾ ಜನರ ಪರವಾಗಿದೆ’
Last Updated 11 ಜುಲೈ 2022, 12:41 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದಲ್ಲಿ ಪ್ರತಿಭಟನಾಕಾರರು ಅಧ್ಯಕ್ಷರು ಮತ್ತು ಪ್ರಧಾನಿಗಳ ಅಧಿಕೃತ ನಿವಾಸಕ್ಕೆ ನುಗ್ಗಿ ದಾಂದಲೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶ್ರೀಲಂಕಾಕ್ಕೆ ಭಾರತ ಸೇನಾಪಡೆಯನ್ನು ಕಳುಹಿಸಲಿದೆ ಎಂಬ ಮಾಧ್ಯಮ ವರದಿಗಳನ್ನು ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್ ಅಲ್ಲಗಳೆದಿದೆ.

‘ಶ್ರೀಲಂಕಾಕ್ಕೆ ಭಾರತ ತನ್ನ ಸೈನ್ಯ ಕಳುಹಿಸಲಿದೆ ಎಂಬ ವರದಿಗಳನ್ನು ಭಾರತೀಯ ಹೈ ಕಮಿಷನ್‌ ಸ್ಪಷ್ಟವಾಗಿ ನಿರಾಕರಿಸಲು ಬಯಸುತ್ತದೆ’ ಎಂದು ಟ್ವೀಟ್‌ ಮಾಡಿದೆ.

‘ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಮೂಲಕ ಸಮೃದ್ಧಿ ಮತ್ತು ಪ್ರಗತಿಗೆ ಪ್ರಯತ್ನಿಸುತ್ತಿರುವ ಶ್ರೀಲಂಕಾದ ಜನರೊಂದಿಗೆ ಭಾರತ ನಿಂತಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ’ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT