ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಪರೀಕ್ಷೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ: ಡೊನಾಲ್ಡ್ ಟ್ರಂಪ್

Last Updated 11 ಆಗಸ್ಟ್ 2020, 3:01 IST
ಅಕ್ಷರ ಗಾತ್ರ

ವಾಷಿಂಗ್ಟನ್: ‘ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅದು ಬಿಟ್ಟರೆ ಯಾವ ದೇಶವೂ ಅಮೆರಿಕದ ಸನಿಹವೂ ಬಂದಿಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಹೇಳಿರುವ ಪ್ರಕಾರ ಅಮೆರಿಕ ಈವರೆಗೆ 6.5 ಕೋಟಿ ಪರೀಕ್ಷೆಗಳನ್ನು ನಡೆಸಿದ್ದರೆ, ಭಾರತ 1.1 ಕೋಟಿ ಪರೀಕ್ಷೆಗಳನ್ನು ನಡೆಸಿದೆ.

‘ನಾವು ಸುಮಾರು 6.5 ಕೋಟಿ ಪರೀಕ್ಷೆಗಳನ್ನು ನಡೆಸಿದ್ದು, ಈ ವಿಚಾರದಲ್ಲಿ ಯಾವ ದೇಶವೂ ನಮ್ಮ ಸನಿಹ ಬಂದಿಲ್ಲ. ಭಾರತವು 1.1 ಕೋಟಿ ಪರೀಕ್ಷೆಗಳನ್ನು ನಡೆಸಿ ಎರಡನೇ ಸ್ಥಾನದಲ್ಲಿದ್ದು, ಆ ದೇಶವು 150 ಕೋಟಿ ಜನಸಂಖ್ಯೆ ಹೊಂದಿದೆ. ಸೋಂಕು ಪರೀಕ್ಷೆಯ ಹಾಗೂ ಗುಣಮಟ್ಟದ ಪರೀಕ್ಷೆಯ ವಿಚಾರದಲ್ಲಿ ನಾವು ಬಹಳ ಮುಂದಿದ್ದೇವೆ’ ಎಂದು ಟ್ರಂಪ್ ಹೇಳಿದ್ದಾರೆ.

‘ವರ್ಷಾಂತ್ಯದೊಳಗೆ ಕೊರೊನಾ ಲಸಿಕೆ ಸಿದ್ಧವಾಗುವ ಭರವಸೆಯಿದೆ. ಕೂಡಲೇ ಅದನ್ನು ಜನರಿಗೆ ದೊರೆಯುವಂತೆ ಮಾಡಲಾಗುವುದು’ ಎಂದು ಟ್ರಂಪ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT