ಶನಿವಾರ, ಸೆಪ್ಟೆಂಬರ್ 25, 2021
22 °C
ಪಾಕ್ ರಾಜತಾಂತ್ರಿಕರನ್ನು ಕರೆಸಿ ಪ್ರತಿಭಟನೆ ದಾಖಲು

ಹಿಂದೂ ದೇಗುಲ ಧ್ವಂಸ: ಪಾಕ್‌ ವಿರುದ್ಧ ಭಾರತ ಸಮನ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಹೀಂ ಯಾರ್ ಖಾನ್‌ನಲ್ಲಿರುವ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತವು ಗುರುವಾರ ಪಾಕಿಸ್ತಾನದ ರಾಜತಾಂತ್ರಿಕರನ್ನು ಕರೆಸಿ ತನ್ನ ಬಲವಾದ ಪ್ರತಿಭಟನೆಯನ್ನು ದಾಖಲಿಸಿದೆ.

‘ಪಾಕಿಸ್ತಾನದ ರಾಜತಾಂತ್ರಿಕರನ್ನು ಗುರುವಾರ ಮಧ್ಯಾಹ್ನ ಕರೆಸಲಾಯಿತು. ಹಿಂದೂ ದೇಗುಲದ ಧ್ವಂಸ ಘಟನೆಯನ್ನು ಖಂಡಿಸಿದ ಭಾರತವು ತೀವ್ರ ಪ್ರತಿಭಟನೆ ದಾಖಲಿಸಿತು’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

‘ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಕುರಿತು ಭಾರತವು ಕಳವಳ ವ್ಯಕ್ತಪಡಿಸಿತು’ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು