ಭಾನುವಾರ, ಮಾರ್ಚ್ 26, 2023
21 °C

ಜಿ20 ಭಾರತದ ಅಧ್ಯಕ್ಷತೆಯಲ್ಲಿ ಬಹುರಾಷ್ಟ್ರೀಯ ಬ್ಯಾಂಕ್ ವಿಷಯ ಚರ್ಚೆ: ನಿರ್ಮಲಾ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಜಿ20 ರಾಷ್ಟ್ರಗಳ ಭಾರತದ ಅಧ್ಯಕ್ಷತೆಯ ಅಧಿಕಾರಾವಧಿಯಲ್ಲಿ ಬಹುರಾಷ್ಟ್ರೀಯ ಅಭಿವೃದ್ಧಿ ಬ್ಯಾಂಕ್‌ಗಳು, ಸಾಲದ ನಿರ್ವಹಣೆ, ಹವಾಮಾನ ಬದಲಾವಣೆ ಸೇರಿದಂತೆ ಪ್ರಮುಖ ವಿಷಯಗಳ ಮೇಲೆ ಗಮನ ಕೇಂದ್ರಿಕರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

20 ರಾಷ್ಟ್ರಗಳ ಸಂಘಟನೆಯಾದ ಜಿ-20 ಅಧ್ಯಕ್ಷ ಸ್ಥಾನವನ್ನು ಇದೇ ವರ್ಷ ಡಿಸೆಂಬರ್ 1ರಂದು ಭಾರತ ಅಲಂಕರಿಸಲಿದ್ದು, 2023ರ ನವೆಂಬರ್ 30ರ ವರೆಗೆ ಅಧಿಕಾರಾವಧಿ ಇರಲಿದೆ. ಮುಂದಿನ ವರ್ಷ ಭಾರತವು ಜಿ-20 ಶೃಂಗಸಭೆಯನ್ನು ಆಯೋಜಿಸಲಿದೆ.\

ಇದನ್ನೂ ಓದಿ: 

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಗಳಲ್ಲಿ ಜಿ20 ಭಾರತದ ಅಧಿಕಾರವಧಿಯಲ್ಲಿ ನೀಡಲಾಗುವ ಆದ್ಯತಾ ವಿಷಯಗಳ ಕುರಿತು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.

ಎಲ್ಲ ರಾಷ್ಟ್ರಗಳು ಧನಾತ್ಮಕ ಹಾಗೂ ಸಹಕಾರದ ಮನಸ್ಥಿತಿಯಲ್ಲಿವೆ. ಭಾರತದ ಅಧ್ಯಕ್ಷತೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಮಾಹಿತಿ ನೀಡಲಾಯಿತು ಎಂದು ಭಾರತದ ನಿಯೋಗದೊಂದಿಗೆ ಭಾಗವಹಿಸಿದ ನಿರ್ಮಲಾ ತಿಳಿಸಿದರು.

ನಿರ್ಮಲಾ ಸೀತಾರಾಮನ್ ಆರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಐಎಂಎಫ್ ಮತ್ತು ವಿಶ್ವ ಬ್ಯಾಂಕ್‌ನ ವಾರ್ಷಿಕ ಸಭೆ ಸೇರಿದಂತೆ ವಿವಿಧ ದೇಶಗಳ ಪ್ರತಿನಿಧಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು