ಲಂಡನ್: ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಸಂಬಂಧಿಸಿ ಮಾತುಕತೆಯಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲು ಭಾರತ ಹಾಗೂ ಬ್ರಿಟನ್ ಸಮ್ಮತಿಸಿವೆ.
ಈ ಒಪ್ಪಂದಕ್ಕೆ ಶೀಘ್ರವೇ ಸಹಿ ಹಾಕಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಬ್ರಿಟನ್ ಸರ್ಕಾರ, ಇದಕ್ಕೆ ಪೂರಕವಾಗಿ ಶೀಘ್ರವೇ ‘ಆರ್ಥಿಕತೆ ಹಾಗೂ ಹಣಕಾಸು ಸಂವಾದ’ವನ್ನು ಆಯೋಜಿಸಲಾಗುವುದು ಎಂದು ಹೇಳಿದೆ.
ಎಫ್‌ಟಿಎಗೆ ಸಂಬಂಧಿಸಿ ಭಾರತವು ಬ್ರಿಟನ್ ಜೊತೆ ಇತ್ತೀಚೆಗೆ ಏಳನೇ ಸುತ್ತಿನ ಮಾತುಕತೆ ಮುಗಿಸಿದೆ. ಈಗ, ಈ ಮಾತುಕತೆಯನ್ನು ಮತ್ತೊಂದು ಹಂತಕ್ಕೆ ಒಯ್ಯುವುದಕ್ಕೆ ಸಂಬಂಧಿಸಿ ಬ್ರಿಟನ್‌ನಿಂದ ಈ ಹೇಳಿಕೆ ಹೊರಬಿದ್ದಿದೆ.
ಭಾರತದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಜಿ–20 ರಾಷ್ಟ್ರಗಳ ಹಣಕಾಸು ಸಚಿವರ ಹಾಗೂ ಕೇಂದ್ರೀಯ ಬ್ಯಾಂಕುಗಳ ಗವರ್ನರ್‌ಗಳ ಸಭೆಯಲ್ಲಿ ಹಣಕಾಸು ಸಚಿವ ಜೆರೆಮಿ ಹಂಟ್, ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದರು.
ಆರ್ಥಿಕತೆ ಹಾಗೂ ಹಣಕಾಸು ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ಬ್ರಿಟನ್‌ನ ಖಜಾನೆ ಇಲಾಖೆ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.