ಮಂಗಳವಾರ, ನವೆಂಬರ್ 24, 2020
22 °C

ಭಾರತ–ಅಮೆರಿಕ ಬಾಂಧವ್ಯವು ವಿರೋಧಿಗಳಿಗೆ ಎಚ್ಚರಿಕೆಯ ಗಂಟೆ: ಅಮೆರಿಕದ ಸೆನೆಟರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಭಾರತ ಮತ್ತು ಅಮೆರಿಕ ನಡುವಣ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಮೂಲಕ ರಷ್ಯಾ ಮತ್ತು ಚೀನಾದಂತಹ ವಿರೋಧಿ ರಾಷ್ಟ್ರಗಳಿಗೆ ಕಠಿಣ ಸಂದೇಶ ರವಾನಿಸಲಾಗಿದೆ’ ಎಂದು ಅಮೆರಿಕದ ಆಡಳಿತಾರೂಢ ರಿಪಬ್ಲಿಕನ್‌ ಪಕ್ಷದ ಪ್ರಭಾವಿ ಸೆನೆಟರ್ ಕೆವಿನ್‌ ಕ್ರೇಮರ್ ತಿಳಿಸಿದ್ದಾರೆ.

ಭಾರತದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹಾಗೂ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್‌ ಎಸ್ಪರ್‌ ಮತ್ತು ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ನಡುವೆ ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ 2+2  (ಎರಡೂ ದೇಶಗಳ ರಕ್ಷಣಾ ಮತ್ತು ವಿದೇಶಾಂಗ ಸಚಿವರ) ಸಭೆ ಆಯೋಜಿಸಲಾಗಿತ್ತು.

ಭಾರತದ ಸಾರ್ವಭೌಮತೆಗೆ ಎದುರಾಗುವ ಯಾವುದೇ ಬೆದರಿಕೆಯನ್ನು ಎದುರಿಸಲು ನೆರವಾಗುವುದಾಗಿ ಈ ಸಭೆಯ ವೇಳೆ ಅಮೆರಿಕ ಭರವಸೆ ನೀಡಿತ್ತು. ಮೂಲಭೂತ ವಿನಿಮಯ ಮತ್ತು ಸಹಕಾರ ಒಪ್ಪಂದಕ್ಕೂ (ಬಿಎಸಿಎ) ಈ ವೇಳೆ ಸಹಿ ಹಾಕಲಾಗಿತ್ತು.

‘ಅಮೆರಿಕ ಮತ್ತು ಭಾರತ ನಡುವಣ ಬಾಂಧವ್ಯ ವೃದ್ಧಿಯು ಉಭಯ ದೇಶಗಳನ್ನು ಸುರಕ್ಷಿತವಾಗಿರಿಸುತ್ತದೆ. ಆರ್ಥಿಕತೆಯ ಬಲವೃದ್ಧಿಗೂ ಇದು ಸಹಕಾರಿಯಾಗಲಿದೆ ’ ಎಂದು ಸೆನೆಟರ್‌ ಕೆವಿನ್‌ ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು