ಭಾನುವಾರ, ಅಕ್ಟೋಬರ್ 24, 2021
24 °C

26/11ರ ಮುಂಬೈ ದಾಳಿ ಸಂಚುಕೋರರಿಗೆ ಶಿಕ್ಷೆಯಾಗಲಿ: ಭಾರತ–ಅಮೆರಿಕ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: 26/11ರ ಮುಂಬೈ ದಾಳಿಯ ಸಂಚುಕೋರರಿಗೆ ಶಿಕ್ಷೆಯಾಗಲಿ ಎಂದು ಭಾರತ ಮತ್ತು ಅಮೆರಿಕ ಆಗ್ರಹಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ಬಳಿಕ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ವಿಶ್ವಸಂಸ್ಥೆಯು ನಿಷೇಧಿಸಿರುವ ಉಗ್ರ ಸಂಘಟನೆಗಳೂ ಸೇರಿದಂತೆ ಎಲ್ಲ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಸಂಘಟಿತ ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಉಭಯ ದೇಶಗಳು ಖಂಡಿಸಿವೆ.

ಓದಿ: 

ಗಡಿಯಾಚಗಿನ ಭಯೋತ್ಪಾದನೆಯನ್ನು ಎರಡೂ ದೇಶಗಳು ಖಂಡಿಸಿದ್ದು, ಮುಂಬೈ ದಾಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿವೆ. ಭಯೋತ್ಪಾದಕ ಸಂಘಟನೆಗಳಿಗೆ ಯಾವುದೇ ರೀತಿಯ ನೆರವು ನೀಡುವುದನ್ನೂ ಖಂಡಿಸಿವೆ.

2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಜಮಾತ್ ಉದ್ ದಾವಾದ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಲಷ್ಕರ್ ಎ ತಯ್ಬಾ ಉಗ್ರ ಸಂಘಟನೆಗಳ ಕೈವಾಡವಿದೆ. ದಾಳಿಯಲ್ಲಿ ಆರು ಮಂದಿ ಅಮೆರಿಕನ್ನರು ಸೇರಿದಂತೆ 166 ಮಂದಿ ಮೃತಪಟ್ಟಿದ್ದರು.

ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಯಲ್ಲಿರುವ ಹಫೀಜ್ ಸಯೀದ್‌ನನ್ನು ಕಳೆದ ವರ್ಷ ಜುಲೈ 17ರಂದು ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಗಿತ್ತು. ಆತನನ್ನು ಲಾಹೋರ್‌ನ ಕೋಟ್ ಲಖ್‌ಪತ್ ಜೈಲಿನಲ್ಲಿ ಇರಿಸಲಾಗಿದೆ.

ಓದಿ: 

ಮುಂಬೈ ದಾಳಿಕೋರರ ಮತ್ತು ಉಗ್ರ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಭಾರತವು ಪಾಕಿಸ್ತಾನವನ್ನು ಪದೇಪದೇ ಆಗ್ರಹಿಸುತ್ತಲೇ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು