ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಡನ್ ನೂರು ದಿನಗಳ ಆಡಳಿತದಲ್ಲಿ ಭಾರತ– ಅಮೆರಿಕ ಸಂಬಂಧ ಮತ್ತಷ್ಟು ಗಟ್ಟಿ

ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆಯ ವಕ್ತಾರ ನೆಡ್‌ ಪ್ರೈಸ್‌
Last Updated 30 ಏಪ್ರಿಲ್ 2021, 5:59 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್ ಅವರ ಮೊದಲ ನೂರು ದಿನಗಳ ಆಡಳಿತದಲ್ಲಿ, ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್‌ ಪ್ರೈಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ನೂರು ದಿನಗಳಲ್ಲಿ ಉಭಯ ರಾಷ್ಟ್ರಗಳ ನಡುವೆ ಆಗಿರುವ ಒಪ್ಪಂದಗಳು ಜಾಗತಿಕವಾಗಿ ಸಮಗ್ರ ಸಹಭಾಗಿತ್ವವನ್ನು ಪ್ರತಿಬಿಂಬಿಸುತ್ತವೆ‘ ಎಂದು ಪ್ರೈಸ್ ಹೇಳಿದರು.

‘ಅಮೆರಿಕ ಮತ್ತು ಭಾರತದ ನಡುವೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿದೆ. ಜೋ ಬೈಡನ್ ಅವರು ಕಳೆದ ರಾತ್ರಿ ಮಾಡಿದ ಭಾಷಣದಲ್ಲಿ ಭಾರತದ ಸಂಬಂಧದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ನಿಟ್ಟಿನಲ್ಲಿ ಭಾರತದೊಂದಿಗೆ ದೀರ್ಘವಾದ ಪಾಲುದಾರಿಕೆ ಮತ್ತು ಬದ್ಧತೆಯನ್ನು ನಿರೀಕ್ಷಿಸಬಹುದು‘ ಎಂದು ಪ್ರೈಸ್‌ ವಿವರಿಸಿದರು.

ಅಧ್ಯಕ್ಷ ಜೋಬೈಡನ್ ಅವರು ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡುವ ಅವಕಾಶ ಬಂದೊದಗಿತ್ತು. ಸರ್ಕಾರದ ಕಾರ್ಯದರ್ಶಿ ಟೋನಿ ಬ್ಲಿಂಕೆನ್ ಅವರು ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರೊಂದಿಗೆ ಇತ್ತೀಚೆಗೆ ಕೆಲವು ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಪ್ರೈಸ್ ಉಲ್ಲೇಖಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT