ಶುಕ್ರವಾರ, ಅಕ್ಟೋಬರ್ 7, 2022
24 °C

ಬೆಳಗಾವಿ ಮೂಲದ ಉದ್ಯಮಿಗೆ ಡೆಟ್ರಾಯ್ಟ್‌ನಲ್ಲಿ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದಲ್ಲಿ ನೆಲೆಸಿರುವ ಬೆಳಗಾವಿ ಮೂಲದ ಉದ್ಯಮಿ ಥಾನೇದಾರ್ (67) ಅವರು ಡೆಟ್ರಾಯ್ಟ್ ಜಿಲ್ಲೆಯಲ್ಲಿ ಕಳೆದ ವಾರ ನಡೆದ ಡೆಮಾಕ್ರಟಿಕ್‌ ಪಕ್ಷದ ಪ್ರಾಥಮಿಕ ಹಂತದ ಪ್ರಮುಖ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಆಗಸ್ಟ್ 2ರಂದು ಈ ಚುನಾವಣೆಯಲ್ಲಿ ತಮ್ಮದೇ ಪಕ್ಷದ ಇತರ ಎಂಟು ಅತಿಗಣ್ಯ ಅಭ್ಯರ್ಥಿಗಳ ಪ್ರಬಲ ಪೈಪೋಟಿಯ ನಡುವೆ ಥಾನೇದಾರ್‌ ಅವರು ಪಕ್ಷದ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.  

ಡೆಟ್ರಾಯ್ಟ್ ಜಿಲ್ಲೆ ಡೆಮಾಕ್ರಟಿಕ್‌ ಪಕ್ಷದ ಭದ್ರಕೋಟೆಯಾಗಿದ್ದು, ನವೆಂಬರ್‌ನಲ್ಲಿ ಎದುರಾಗಲಿರುವ ಮಧ್ಯಂತರ ಚುನಾವಣೆಯಲ್ಲಿ ಥಾನೇದಾರ್‌ ಅವರಿಗೆ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಮಾರ್ಟೆಲ್‌ ಬಿವಿಂಗ್ಸ್‌ ಎದುರು ಗೆಲುವು ಸುಲಭವಾಗಲಿದೆ ಎಂದು ರಾಜಕೀಯ ಪರಿಣತರು ವಿಶ್ಲೇಷಿಸಿದ್ದಾರೆ. 

ಥಾನೇದಾರ್‌ 1979ರಲ್ಲಿ ಅಮೆರಿಕಕ್ಕೆ ವಲಸೆ ಬಂದಿದ್ದಾರೆ. 1977ರಲ್ಲಿ ಬಾಂಬೆ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, 1982ರಲ್ಲಿ ಅಕ್ರಾನ್‌ ಯುನಿರ್ವಸಿಟಿಯಿಂದ ಪಾಲಿಮರ್‌ ರಾಸಾಯನ ವಿಜ್ಞಾನದಲ್ಲಿ ಪಿಎಚ್‌.ಡಿ ಪದವಿ ಪಡೆದಿದ್ದಾರೆ. 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.