ಅಮೆರಿಕ: ಕಮಲಾ ಹ್ಯಾರಿಸ್ ರಕ್ಷಣಾ ಸಲಹೆಗಾರರಾಗಿ ಶಾಂತಿ ಸೇಠಿ ನೇಮಕ

ವಾಷಿಂಗ್ಟನ್: ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಕಾರ್ಯನಿರ್ವಾಹಕ ಕಾರ್ಯದರ್ಶಿ ಹಾಗೂ ರಕ್ಷಣಾ ಸಲಹೆಗಾರರನ್ನಾಗಿ ಭಾರತೀಯ ಅಮೆರಿಕನ್ ನೌಕಾಪಡೆಯ ನಿವೃತ್ತ ಅಧಿಕಾರಿ ಶಾಂತಿ ಸೇಠಿ ಅವರನ್ನು ನೇಮಕ ಮಾಡಲಾಗಿದೆ.
1993ರಲ್ಲಿ ಅಮೆರಿಕ ನೌಕಾಪಡೆ ಸೇರಿದ್ದ ಶಾಂತಿ ಸೇಠಿ ಅವರು, ಕಮಾಂಡರ್ ಹುದ್ದೆಗೇರಿದ ಮೊದಲ ಭಾರತೀಯ ಅಮೆರಿಕನ್ ಆಗಿದ್ದಾರೆ. ಅವರ ತಂದೆ 1960ರಲ್ಲಿ ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.