ಮಂಗಳವಾರ, ಮಾರ್ಚ್ 9, 2021
29 °C

ಅಮೆರಿಕದ ಸಿಎಂಎಸ್‌ ಆಡಳಿತಾಧಿಕಾರಿ ಸೀಮಾ ವರ್ಮಾ ರಾಜೀನಾಮೆ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತದ ಉನ್ನತ ಅಧಿಕಾರಿ, ಭಾರತೀಯ ಅಮೆರಿಕನ್‌ ಸೀಮಾ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೆಡಿಕೇರ್ ಮತ್ತು ಮೆಡಿಕೇಡ್ ಸೇವಾ ಕೇಂದ್ರಗಳ (ಸಿಎಂಎಸ್‌) ಆಡಳಿತಾಧಿಕಾರಿ ಸೀಮಾ ವರ್ಮಾ ಅವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಅವರು ಈ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ್ದರು. 

ಕಳೆದ ವರ್ಷ ಮೇ ತಿಂಗಳಲ್ಲಿ ಡೊನಾಲ್ಡ್‌ ಟ್ರಂಪ್‌, ಸೀಮಾ ಅವರನ್ನು ಕೊರೊನಾ ವೈರಸ್‌ ಟಾಸ್ಕ್‌ ಫೋರ್ಸ್‌ನ ಪ್ರಮುಖ ಸದಸ್ಯರನ್ನಾಗಿ ನೇಮಿಸಿದ್ದರು.

‘ಟ್ರಂಪ್‌ ಅವರ ಆಡಳಿತ ಇನ್ನೇನು ಕೊನೆಗೊಳ್ಳಲಿದೆ. ಹಾಗಾಗಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ಆಡಳಿತಾಧಿಕಾರಿಗೆ ಅಧಿಕಾರವನ್ನು ಹಸ್ತಾಂತರಿಸಲಿದ್ದೇನೆ’ ಎಂದು ಸೀಮಾ ವರ್ಮಾ ಶುಕ್ರವಾರ ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ತಮ್ಮ ರಾಜೀನಾಮೆ ಪತ್ರವನ್ನು ಕೂಡ ಹಂಚಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು