ಭಾನುವಾರ, ನವೆಂಬರ್ 1, 2020
20 °C

ವಿಶ್ವಸಂಸ್ಥೆ: ಪಾಕ್ ಪಿಎಂ ಇಮ್ರಾನ್‌ ಖಾನ್ ಭಾಷಣ ಆರಂಭಿಸುತ್ತಲೇ ಹೊರ ನಡೆದ ಭಾರತ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ವಿಶ್ವಸಂಸ್ಥೆಯ 75ನೇ ಮಹಾ ಅಧಿವೇಶನದ ಉದ್ದೇಶಿಸಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾಷಣ ಆರಂಭಿಸುತ್ತಲೇ ಭಾರತದ ಪ್ರತಿನಿಧಿ ಸಭಾತ್ಯಾಗ ಮಾಡಿದ್ದಾರೆ.

ಇಮ್ರಾನ್ ಅವರು ಅಧಿವೇಶನ ಉದ್ದೇಶಿಸಿ ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದರು. ಇಮ್ರಾನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದಲ್ಲದೆ, ಜಮ್ಮು–ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದರು.

ಇಮ್ರಾನ್ ಭಾಷಣ ಆರಂಭವಾಗುತ್ತಿದ್ದಂತೆಯೇ, ವಿಶ್ವಸಂಸ್ಥೆಯಲ್ಲಿ ಭಾರತದ ''ಪರ್ಮನೆಂಟ್ ಮಿಷನ್‌''ನ ಕಾರ್ಯದರ್ಶಿ ಮಿಜಿಟೊ ವಿನಿಟೊ ಸಭೆಯಿಂದ ಹೊರ ನಡೆದರು. ಅವರು ಸಭಾತ್ಯಾಗ ಮಾಡುತ್ತಿರುವ ವಿಡಿಯೊವನ್ನು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: 

ಈ ಮಧ್ಯೆ, ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಇಮ್ರಾನ್ ಖಾನ್ ಮಾಡಿರುವ ಭಾಷಣಕ್ಕೆ ಭಾರತ ತಕ್ಕ ತಿರುಗೇಟು ನೀಡಿದೆ.

‘ಪಾಕಿಸ್ತಾನದ ಪ್ರಧಾನಿ ಹೇಳಿಕೆಯು ಕೀಳುಮಟ್ಟದ್ದಾಗಿದ್ದು ಕೆಟ್ಟ ಸುಳ್ಳುಗಳು, ವೈಯಕ್ತಿಕ ನಿಂದನೆ, ಆಕ್ರಮಣಶೀಲತೆಯಿಂದ ಕೂಡಿವೆ. ಪಾಕಿಸ್ತಾನದ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಮುಚ್ಚಿಡಲಾಗಿದೆ. ಇದಕ್ಕೆ ತಕ್ಕ ತಿರುಗೇಟು ನೀಡುವ ಹಕ್ಕು ಭಾರತಕ್ಕಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು