ಗುರುವಾರ , ಆಗಸ್ಟ್ 11, 2022
23 °C

ಷಿಕಾಗೊ ಒ’ಹೇರ್‌ ವಿಮಾನ ನಿಲ್ದಾಣದಲ್ಲಿ ಭಾರತೀಯ ಕಾರ್ಮಿಕ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನ್ಯೂಯಾರ್ಕ್‌: ಷಿಕಾಗೊ ಒ’ಹೇರ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ 36 ವರ್ಷದ ಭಾರತೀಯ ವ್ಯಕ್ತಿಯೊಬ್ಬರು ವಿಮಾನವನ್ನು ಎಳೆದೊಯ್ಯುವ ವಾಹನದಡಿಗೆ ಬಿದ್ದು ಮೃತಪಟ್ಟಿದ್ದಾರೆ.

ಜಿಜೊ ಜಾರ್ಜ್‌ ಮೃತಪಟ್ಟವರು. ಕೇರಳದ ಪಟ್ಟಣಪುರಂ ಮೂಲದ ಜಾರ್ಜ್‌ ಎನ್‌ವಾಯ್‌ ಏರ್‌ನಲ್ಲಿ ನಿರ್ವಹಣಾ ಮೆಕ್ಯಾನಿಕ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಿಮಾನ ನಿಲ್ದಾಣದ ಸಮೀಪವಿರುವ ಹ್ಯಾಂಗರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಜಾರ್ಜ್‌ ಪತ್ನಿ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಮಗು ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ. ಇಡೀ ಕುಟುಂಬವು ಷಿಕಾಗೊದಲ್ಲೇ ವಾಸಿಸುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು