ಟೊರಾಂಟೊ: ಖಾಲಿಸ್ತಾನ ಬೆಂಬಲಿಗರು ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಭಾರತೀಯ ರಾಯಭಾರಿ ಭಾಗವಹಿಸಬೇಕಿದ್ದ ಕಾರ್ಯಕ್ರಮವನ್ನು ಭದ್ರತಾ ಕಾರಣದಿಂದ ರದ್ದುಗೊಳಿಸಲಾಗಿದೆ.
ಕಾರ್ಯಕ್ರಮವನ್ನು ಭಾನುವಾರ ತಾಜ್ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಭಾರತದ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಅವರು ಭೇಟಿ ನೀಡಬೇಕಿತ್ತು. ಇದು ಪಶ್ಚಿಮ ಕರಾವಳಿಗೆ ಅವರ ಮೊದಲ ಭೇಟಿಯಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.