ಬುಧವಾರ, ಜೂನ್ 29, 2022
24 °C

ಬೀಜಿಂಗ್ | ಬ್ರಿಕ್ಸ್‌ ಶೃಂಗಸಭೆ ಆರಂಭ; ಉಕ್ರೇನ್‌ ಯುದ್ಧ ಕುರಿತು ಚರ್ಚೆ ಸಾಧ್ಯತೆ

ಎಪಿ Updated:

ಅಕ್ಷರ ಗಾತ್ರ : | |

ಬೀಜಿಂಗ್: ಎರಡು ದಿನಗಳ ‘ಬ್ರಿಕ್ಸ್‌’ ಶೃಂಗಸಭೆ ವರ್ಚುವಲ್‌ ಆಗಿ ಗುರುವಾರ ಇಲ್ಲಿ ಆರಂಭಗೊಂಡಿತು.

‘ಬ್ರಿಕ್ಸ್‌’ನ ಪ್ರಸಕ್ತ ಅವಧಿಯ ಅಧ್ಯಕ್ಷ ಸ್ಥಾನದಲ್ಲಿರುವ ಚೀನಾ, ಈ ಶೃಂಗಸಭೆಯ ಆತಿಥ್ಯ ವಹಿಸಿಕೊಂಡಿದೆ. ಪ್ರಸಕ್ತ ಶೃಂಗಸಭೆಯು ಯಾವುದೇ ನಿರ್ದಿಷ್ಟ ಕಾರ್ಯಸೂಚಿಯನ್ನು ಹೊಂದಿರದಿದ್ದರೂ, ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧ ಹಾಗೂ ಸದಸ್ಯ ರಾಷ್ಟ್ರಗಳ ಆರ್ಥಿಕತೆ ಮೇಲೆ ಯುದ್ಧದ ಪರಿಣಾಮ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳು ಹೆಚ್ಚು ಎನ್ನಲಾಗಿದೆ.

ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ, ಬ್ರೆಜಿಲ್‌ ಅಧ್ಯಕ್ಷ ಜೈರ್ ಬೊಲ್ಸೊನಾರೊ ಈ ಸಭೆಯಲ್ಲಿ ವರ್ಚುವಲ್‌ ಆಗಿ ಪಾಲ್ಗೊಂಡಿದ್ದರು.

ಭೇಟಿ: ಶೃಂಗಸಭೆಗೂ ಮುನ್ನ, ಚೀನಾದಲ್ಲಿ ಭಾರತದ ರಾಯಭಾರಿಯಾಗಿರುವ ಪ್ರದೀಪಕುಮಾರ್ ರಾವತ್‌ ಅವರು ವಿದೇಶಾಂಗ ಸಚಿವ ವಾಂಗ್‌ ಯಿ ಅವರನ್ನು ಭೇಟಿ ಮಾಡಿದರು.

ರಾಯಭಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾವತ್‌ ಹಾಗೂ ವಾಂಗ್‌ ನಡುವಿನ ಮೊದಲ ಭೇಟಿ ಇದಾಗಿದೆ. ಪೂರ್ವ ಲಡಾಖ್‌ನಲ್ಲಿ ಉಭಯ ದೇಶಗಳ ನಡುವಿನ ಗಡಿ ಬಿಕ್ಕಟ್ಟು ಮುಂದುವರಿದಿರುವ ನಡುವೆಯೇ, ರಾವತ್‌ ಹಾಗೂ ವಾಂಗ್‌ ಅವರು ನಡೆಸಿರುವ ಮಾತುಕತೆಗೆ ಮಹತ್ವದ ಬಂದಿದೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು