ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಸಾ: ಅನಧಿಕೃತ ಏಜೆಂಟರಿಂದ ಶುಲ್ಕ ವಸೂಲಿ, ತನಿಖೆಗೆ ಮುಂದಾದ ಭಾರತೀಯ ಹೈಕಮಿಷನ್

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿ ಹೇಳಿಕೆ
Last Updated 8 ಅಕ್ಟೋಬರ್ 2022, 14:31 IST
ಅಕ್ಷರ ಗಾತ್ರ

ಲಂಡನ್: ಭಾರತಕ್ಕೆ ಪ್ರಯಾಣಿಸುವವರ ವೀಸಾಗಳ ಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನಧಿಕೃತ ಏಜೆಂಟರು ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಇಲ್ಲಿನ ಭಾರತೀಯ ಹೈಕಮಿಷನ್ ಕಚೇರಿ ಶನಿವಾರ ಹೇಳಿದೆ.

ಬರುವ ವಾರಗಳಲ್ಲಿ ಭಾರತಕ್ಕೆ ತೆರಳುತ್ತಿರುವ ಬ್ರಿಟನ್‌ ಪ್ರಯಾಣಿಕರು ತಮ್ಮ ವೀಸಾ ಪರಿಶೀಲನೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕುರಿತು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ, ಹೈಕಮಿಷನ್ ಕಚೇರಿಯು ಅನಧಿಕೃತ ಏಜೆಂಟರ ಬಗ್ಗೆ ಎಚ್ಚರಿಕೆ ನೀಡಿದೆ. ಅಂತೆಯೇ ವೀಸಾ ಪ್ರಕ್ರಿಯೆ ಸುಗಮಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದೂ ತಿಳಿಸಿದೆ.

‘ವೀಸಾಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ದಿಢೀರ್‌ ಬದಲಾವಣೆಗಳನ್ನು ಮಾಡಲಾಗಿದ್ದು, ಬ್ರಿಟನ್‌ನ ಪ್ರವಾಸಿಗರ ಪ್ರಯಾಣದ ಮೇಲೆ ಇದು ಪರಿಣಾಮ ಬೀರುತ್ತಿದೆ ಎಂಬುದಾಗಿ ಬ್ರಿಟನ್‌ನ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ಸತ್ಯಕ್ಕೆ ದೂರ’ ಎಂದೂ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT