ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎನ್ಎಯಲ್ಲಿ ಸೇವೆ ಸಲ್ಲಿಸಿದ್ದ ಅಧಿಕಾರಿ ಈಶ್ವರ್‌ ಲಾಲ್‌ ಸಿಂಗ್‌ ನಿಧನ

Last Updated 6 ಆಗಸ್ಟ್ 2022, 12:34 IST
ಅಕ್ಷರ ಗಾತ್ರ

ಸಿಂಗಪುರ: ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ನೇತೃತ್ವದ ಇಂಡಿಯನ್‌ ನ್ಯಾಷನಲ್‌ ಆರ್ಮಿಯಲ್ಲಿ ಸೇವೆ ಸಲ್ಲಿಸಿದ್ದ ಸಿಂಗಪುರದ ಈಶ್ವರ್‌ ಲಾಲ್‌ ಸಿಂಗ್‌ (92) ಶುಕ್ರವಾರ ನಿಧನರಾಗಿದ್ದಾರೆ.

ಸಿಂಗ್‌ ಅವರು ಇಂಡಿಯನ್‌ ನ್ಯಾಷನಲ್‌ ಆರ್ಮಿಯನ್ನು 1943ರಲ್ಲಿ ಸೇರಿಕೊಂಡಿದ್ದರು. ಹಲವು ಬಾರಿ ಸುಭಾಷ್‌ಚಂದ್ರ ಬೋಸ್‌ ಅವರನ್ನು ಭೇಟಿಯಾಗಿದ್ದರು.

ಸಿಂಗಪುರದಲ್ಲಿರುವ ಭಾರತೀಯ ಹೈಕಮಿಷನ್‌ ಸಿಂಗ್‌ ಅವರ ನಿಧನವನ್ನು ಖಚಿತಪಡಿಸಿದೆ. ‘ಈಶ್ವರ್‌ ಲಾಲ್‌ ಸಿಂಗ್‌ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೈಕಮಿಷನ್‌ನ ಅಧಿಕಾರಿಗಳು ಟ್ವೀಟ್‌ ಮಾಡಿದ್ದಾರೆ.

ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು 2019ರ ನವೆಂಬರ್‌ನಲ್ಲಿ ಸಿಂಗಪುರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಈಶ್ವರ್‌ ಲಾಲ್‌ ಸಿಂಗ್‌ ಅವರನ್ನು ಭೇಟಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT