ಗುರುವಾರ , ಮೇ 26, 2022
30 °C

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾರತ ಮೂಲದ ಮಹಿಳೆ ಸ್ಪರ್ಧೆ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ (ಪಿಟಿಐ): ವಿಶ್ವಸಂಸ್ಥೆಯಲ್ಲಿರುವ ಭಾರತೀಯ ಮೂಲದ ಉದ್ಯೋಗಿ ಆರೋರಾ ಆಕಾಂಕ್ಷಾ (34) ಅವರು ವಿಶ್ವಸಂಸ್ಥೆಯ ಮುಂದಿನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ.

ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದಲ್ಲಿ (ಯುಎನ್‌ಡಿಪಿ) ಲೆಕ್ಕಪತ್ರ ಪರಿಶೋಧನಾ ಸಂಯೋಜಕಿಯಾಗಿರುವ ಅವರು  ಈ ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ #AroraForSG ಹೆಸರಿನ  ಹ್ಯಾಷ್‌ಟ್ಯಾಗ್‌ ಮೂಲಕ ಪ್ರಚಾರ ಆರಂಭಿಸಿದ್ದಾರೆ. 

ಹಾಲಿ ಪ್ರಧಾನ ಕಾರ್ಯದರ್ಶಿಯಾಗಿರುವ 71 ವರ್ಷದ ಆಂಟೊನಿಯೊ ಗುಟೆರಸ್ ಅವರ ಅಧಿಕಾರಾವಧಿ ಈ ವರ್ಷದ ಡಿಸೆಂಬರ್‌ಗೆ ಕೊನೆಗೊಳ್ಳಲಿದೆ. ಮುಂದಿನ ಐದು ವರ್ಷಗಳ ಅವಧಿಗೂ ತಾನೇ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯಲು ಬಯಸಿರುವುದಾಗಿ ಗುಟೆರಸ್ ಕಳೆದ ತಿಂಗಳು ಹೇಳಿದ್ದರು.

‘ಕಳೆದ 75 ವರ್ಷಗಳಿಂದ ವಿಶ್ವಸಂಸ್ಥೆ ಜಾಗತಿಕವಾಗಿ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ನಿರಾಶ್ರಿತರು / ವಲಸಿಗರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಮಾನವೀಯ ನೆಲೆಯಲ್ಲಿ ನೆರವು ನೀಡಿದ್ದು ಕಡಿಮೆ. ತಂತ್ರಜ್ಞಾನ ಮತ್ತು ನಾವೀನ್ಯತೆ ವಿಚಾರದಲ್ಲೂ ಹಿಂದೆ ಬಿದ್ದಿದೆ. ನಾನು ವಿಶ್ವಸಂಸ್ಥೆಯನ್ನು ಪ್ರಗತಿಯತ್ತ ಕೊಂಡೊಯ್ಯಲು ಬದ್ಧರಾಗಿದ್ದೇನೆ. ಈ ಕಾರಣಕ್ಕಾಗಿ  ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ‘ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು