ಗುರುವಾರ , ಆಗಸ್ಟ್ 11, 2022
21 °C

ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ ಸಿಇಒ ಆಗಿ ಭಾರತ ಮೂಲದ ಅನಿಲ್ ಸೋನಿ‌ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

(ಚಿತ್ರ ಕೃಪೆ: ವಿಶ್ವ ಆರೋಗ್ಯ ಸಂಸ್ಥೆ )

ನ್ಯೂಯಾರ್ಕ್‌: ಆರೋಗ್ಯ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಪಡೆದಿರುವ ಭಾರತ ಮೂಲದ ತಜ್ಞ ಅನಿಲ್‌ ಸೋನಿ ಅವರನ್ನು ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ (ಡಬ್ಲ್ಯುಎಚ್‌ಒ ಫೌಂಡೇಷನ್‌) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂದು ನೇಮಕ ಮಾಡಲಾಗಿದೆ.

ಅನಿಲ್‌ ಅವರು ಜನವರಿ 1ರಂದು ಅಧಿಕಾರ ಸ್ವೀಕರಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಜಗತ್ತನ್ನು ಬಾಧಿಸುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಂಬಂಧ ಈ ಪ್ರತಿಷ್ಠಾನವನ್ನು ಕಳೆದ ಮೇನಲ್ಲಿ ಸ್ಥಾಪಿಸಲಾಗಿದೆ. ಜಿನಿವಾದಲ್ಲಿ ಇದರ ಕೇಂದ್ರ ಕಚೇರಿ ಇದೆ.

‘ಪ್ರತಿಷ್ಠಾನವು ವಿಶ್ವ ಆರೋಗ್ಯ ಸಂಸ್ಥೆಗೆ ಪೂರಕವಾಗಿ ಕಾರ್ಯ ನಿರ್ವಹಿಸುವುದು. ಆರೋಗ್ಯ ಕ್ಷೇತ್ರದಲ್ಲಿನ ಸಂಶೋಧನೆಗೆ ಒತ್ತು ನೀಡುವುದು, ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಿ, ಸ್ವಸ್ಥ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಷ್ಠಾನದ ಉದ್ದೇಶ. ಈ ಉದ್ದೇಶವನ್ನು ಈಡೇರಿಸುವಲ್ಲಿ ಅನಿಲ್‌ ಸೋನಿ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ’ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಆರೋಗ್ಯ ಕ್ಷೇತ್ರದ ಪ್ರಮುಖ ಕಂಪನಿ ವಯಾಟ್ರಿಸ್‌ನ ‘ಜಾಗತಿಕ ಸೋಂಕು ರೋಗಗಳ’ ವಿಭಾಗದ ಮುಖ್ಯಸ್ಥರಾಗಿ ಅನಿಲ್‌ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು