ವಾಷಿಂಗ್ಟನ್: ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಸ್ಫೋರ್ಟ್ಸ್ ಯುಟಿಲಿಟಿ ವಾಹನದಲ್ಲಿ ಗುಂಡಿನ ದಾಳಿಗೆ ತುತ್ತಾದಂತೆ ಕಂಡುಬಂದಿದ್ದ ಭಾರತ ಮೂಲದ 25 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹ್ಯೂಂಡಾಯ್ ಟುಕ್‌ಸನ್ ಎಸ್‌ಯುವಿ ಕಾರಿನಲ್ಲಿದ್ದ ಸಾಯಿ ಚರಣ್ ನಕ್ಕಾ ಅವರ ಮೇಲೆ ಸೋಮವಾರ ಗುಂಡಿನ ದಾಳಿ ನಡೆದಿತ್ತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಸಾಯಿ ಚರಣ್ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಮೆರಿಕದಲ್ಲಿ ಗುಂಡಿನ ದಾಳಿಯಿಂದಾಗಿ ವರ್ಷಕ್ಕೆ 38,000ಕ್ಕೂ ಹೆಚ್ಚು ಮಂದಿ ಬಲಿಯಾಗುತ್ತಿದ್ದಾರೆ. ಅಲ್ಲದೆ, 85,000ಕ್ಕೂ ಹೆಚ್ಚು ಮಂದಿ ಗಾಯಗೊಳ್ಳುತ್ತಿದ್ದಾರೆ ಎಂದು ಅಮೆರಿಕದ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.