ಶುಕ್ರವಾರ, ಮಾರ್ಚ್ 24, 2023
30 °C

ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗುವುದು ಬಹುತೇಕ ಖಚಿತ: ಅ.28 ರಂದು ಪ್ರಮಾಣ ವಚನ?

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಲಂಡನ್: ಬ್ರಿಟನ್ ಪ್ರಧಾನ ಮಂತ್ರಿ ಸ್ಥಾನಕ್ಕೆ ಬಾರತೀಯ ಮೂಲದ ಹಾಗೂ ಬ್ರಿಟನ್‌ ಸಂಸದ ರಿಷಿ ಸುನಕ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಅವರ ಆಯ್ಕೆ ಬಹುತೇಕ ಖಚಿತ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಅರ್ಧಕ್ಕೂ ಹೆಚ್ಚು ಪ್ರಮಾಣದ ಟೋರಿ ಸಂಸದರು ರಿಷಿ ಪರವಾಗಿ ಕಂಡು ಬಂದಿದ್ದರಿಂದ ರಿಷಿ ಸುನಕ್ ಅವರು ಬ್ರಿಟನ್ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ವರದಿಗಳು ಹೇಳಿವೆ.

ಅತ್ತ ಸಂಸದೆ ಪೆನ್ನಿ ಮೋರ್ಡಾಂಟ್ ಕೂಡ ಪ್ರಧಾನಿ ಸ್ಪರ್ಧೆಯಲ್ಲಿದ್ದು ಅವರಿಗೆ ಟೋರಿ ಸಂಸದರ ಬೆಂಬಲ ಕಡಿಮೆ ಇದೆ ಎಂದು ತಿಳಿದು ಬಂದಿದೆ.

ದೊಡ್ಡ ಸವಾಲಿನ ಸಮಯದಲ್ಲಿ ನಾವು ಒಗ್ಗೂಡಬೇಕು. ನಮ್ಮ ಮುಂದಿನ ಪ್ರಧಾನಿಯಾಗಲು ನಮ್ಮ ಸಂಸದೀಯ ಪಕ್ಷದ ಬಹುಪಾಲು ಬೆಂಬಲ ರಿಷಿ ಸುನಕ್ ಅವರಿಗೆ ಇದೆ ಎಂಬುದು ಸ್ಪಷ್ಟವಾಗಿದೆ. ಅವರು ಅದಕ್ಕಾಗಿ ಅಗತ್ಯವಾದ ಪರಿಣತಿ ಮತ್ತು ಅನುಭವವನ್ನು ಹೊಂದಿದ್ದಾರೆ ಎಂದು ಕನ್ಸರ್ವೇಟಿವ್ ಪಾರ್ಟಿ ನಿಕಟಪೂರ್ವ ಅಧ್ಯಕ್ಷ ಬ್ರಾಂಡನ್ ಲೇವಿಸ್ ಟ್ವೀಟ್ ಮಾಡಿದ್ದಾರೆ.

 

ಬೋರಿಸ್ ಜಾನ್ಸನ್ ತಾವು ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಪುನರಾಯ್ಕೆ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ರಿಷಿ ಸುನಕ್ ಅವರ ದಾರಿ ಸುಗಮವಾಗಿದೆ.

ಸೋಮವಾರ ಸಂಜೆ ರಿಷಿ ಸುನಕ್ ಅವರ ಅಧಿಕೃತ ಆಯ್ಕೆಬಗ್ಗೆ ಪ್ರಕಟಣೆ ಹೊರಬೀಳಲಿದ್ದು, ಅ.28 ರಂದು ಪ್ರಮಾಣವಚನ ಸ್ವೀಕರಿಸಬಹುದು ಎಂದು ವರದಿಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು