ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಭಾರತ ಮೂಲದ ಸಿಖ್ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ

Last Updated 9 ಜನವರಿ 2022, 2:09 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಅಮೆರಿಕದ ಜೆಎಫ್‌ಕೆ ವಿಮಾನ ನಿಲ್ದಾಣದಲ್ಲಿ ಭಾರತೀಯ ಮೂಲದ ಸಿಖ್ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ಪೇಟವನ್ನು ಅಪರಿಚಿತ ವ್ಯಕ್ತಿ ಕಿತ್ತೆಸೆದ ಘಟನೆ ವರದಿಯಾಗಿದೆ.

ಈ ಸಂಬಂಧ ವಿಡಿಯೊ ಸಾಮಾಜಿಕ ಜಾಲಣತಾಣಗಳಲ್ಲಿ ಹರಿದಾಡುತ್ತಿದೆ. ಘಟನೆಯನ್ನು ಭಾರತದ ಕಾನ್ಸುಲೇಟ್ ಜನರಲ್ ಸೇರಿದಂತೆ ಹಲವರು ಖಂಡಿಸಿದ್ದಾರೆ.

ನವಜೋತ್ ಪಾಲ್ ಕೌರ್ ಎಂಬವರು ಈ ವಿಡಿಯೊವನ್ನು ಜನವರಿ 4ರಂದು ಮೊದಲ ಬಾರಿಗೆ ಪೋಸ್ಟ್ ಮಾಡಿದ್ದರು. ವಿಮಾನ ನಿಲ್ದಾಣದಲ್ಲಿ ಇದ್ದವರು ಈ ವಿಡಿಯೂ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.

ನ್ಯೂಯಾರ್ಕ್‌ನ ಜಾನ್ ಎಫ್. ಕೆನೆಡಿ (ಜೆಎಫ್‌ಕೆ) ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಭಾರತ ಮೂಲದ ಸಿಖ್ ವ್ಯಕ್ತಿ ಮೇಲೆ ಏಕಾಏಕಿ ಹಲ್ಲೆ ನಡೆಸುತ್ತಿರುವ ಅಪರಿಚಿತ ವ್ಯಕ್ತಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.

ಘಟನೆ ಹಿಂದಿನ ನಿಖರ ಕಾರಣಗಳು ತಿಳಿದು ಬಂದಿಲ್ಲ. ಸಿಖ್ ಸಮುದಾಯದ ವಿರುದ್ಧ ದ್ವೇಷದ ಪ್ರವೃತ್ತಿ ಮುಂದುವರಿದಿದೆ ಎಂಬುದು ವ್ಯಕ್ತವಾಗಿದೆ.

ಈ ದೃಶ್ಯಗಳು ಮನಸ್ಸಿಗೆ ಅತೀವ ನೋವನ್ನುಂಟು ಮಾಡಿದೆ. ಇದನ್ನು ಅಮೆರಿಕದ ಅಧಿಕಾರಿಗಳ ಗಮನಕ್ಕೆ ತಂದಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿರುವುದಾಗಿ ಭಾರತದ ಕಾನ್ಸುಲೇಟ್ ಜನರಲ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT