ಬುಧವಾರ, ಮಾರ್ಚ್ 29, 2023
32 °C

ತಮ್ಮ ಪಕ್ಷವನ್ನು ಸೇರಲು ಮೋದಿಗೆ ಆಹ್ವಾನ ನೀಡಿದ ಇಸ್ರೇಲ್ ಪ್ರಧಾನಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಗ್ಲಾಸ್ಗೋ: ತಮ್ಮ ಪಕ್ಷ ಸೇರಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನೆಟ್‌ ಅವರು ಆಹ್ವಾನ ನೀಡಿದ್ದಾರೆ.

‘ಸಿಒಪಿ26 ಹವಾಮಾನ ಬದಲಾವಣೆ ಶೃಂಗಸಭೆ’ ಬಳಿಕ ಮೋದಿ ಮತ್ತು ಬೆನೆಟ್‌ ನಡುವೆ ಮೊದಲ ಔಪಚಾರಿಕ ಸಭೆ ನಡೆಯಿತು. ಆ ವೇಳೆ ಉನ್ನತ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ದ್ವಿಪಕ್ಷೀಯ ಸಂಬಂಧದ ಬಗ್ಗೆಯೂ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೊವೊಂದು ವೈರಲ್‌ ಆಗಿದೆ.

ವಿಡಿಯೊ ಪ್ರಕಾರ, ‘ನೀವು ಇಸ್ರೇಲ್‌ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿ’ ಎಂದು ಮೋದಿಯವರಿಗೆ ಬೆನೆಟ್‌ ತಿಳಿಸಿದ್ದಾರೆ.

ಬೆನೆಟ್‌ ಅವರಿಗೆ ಪ್ರತಿಕ್ರಿಯಿಸಿರುವ ಮೋದಿ ಧನ್ಯವಾದಗಳನ್ನು ಹೇಳಿದ್ದಾರೆ.

ಮೋದಿಯವರಿಗೆ ಹಸ್ತಲಾಘವ ಮಾಡಿದ ಬೆನೆಟ್‌, 'ಬನ್ನಿ ನಮ್ಮ ಪಕ್ಷಕ್ಕೆ ಸೇರಿಕೊಳ್ಳಿ' ಎಂದು ಆಹ್ವಾನ ನೀಡಿದ್ದಾರೆ.

ಬೆನೆಟ್‌ ಅವರ ಈ ಹಾಸ್ಯಚಟಾಕಿಯು ಮೋದಿ ಅವರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು