ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನಡಾದಲ್ಲಿ ಗುಂಡಿನ ದಾಳಿ: ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಸಾವು

Last Updated 19 ಸೆಪ್ಟೆಂಬರ್ 2022, 12:55 IST
ಅಕ್ಷರ ಗಾತ್ರ

ಟೊರೊಂಟೊ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ನಡೆದಿದ್ದ ಗುಂಡಿನ ಚಕಮಕಿ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿಸತ್ವಿಂದರ್‌ ಸಿಂಗ್ (28) ಸೋಮವಾರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ವಿಂದರ್ ಸಿಂಗ್‌ ಇಲ್ಲಿನ ಎಂ.ಕೆ ಆಟೊ ರಿಪೇರ್ಸ್‌ ಸಂಸ್ಥೆಯಲ್ಲಿ ಅರೆಕಾಲಿಕ ಉದ್ಯೋಗಿಯಾಗಿದ್ದರು. ಕಳೆದ ಸೋಮವಾರ ನಡೆದಿದ್ದ ಗುಂಡಿನ ದಾಳಿಯಲ್ಲಿ ಸಿಂಗ್‌ ಗಾಯಗೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಗುಂಡಿನ ಚಕಿಮಕಿ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್‌ ಸೇರಿ ಮೂವರು ಮೃತಪಟ್ಟಿದ್ದರು.ದಾಳಿ ನಡೆಸಿದ್ದ ಸೀನ್‌ ಪೀಟರ್‌ (40) ಎಂಬಾತ ಬಳಿಕ ಪೊಲೀಸರ ಗುಂಡಿಗೆ ಸಿಲುಕಿ ಅಸುನೀಗಿದ್ದ ಎಂದು ಬಲಿಯಾಗಿದ್ದಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT