ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌: ಸಂಯೋಜಿತ ಕಲಿಕೆಗೆ ಹೊಂದಿಕೊಳ್ಳುತ್ತಿರುವ ಭಾರತೀಯ ವಿದ್ಯಾರ್ಥಿಗಳು

ಕೊರೊನಾ ಕಾಲದಲ್ಲಿ ’ಆನ್‌ಲೈನ್‌ – ವ್ಯಕ್ತಿಗತ ಬೋಧನೆ’ಯ ಸಂಯೋಜನಾ ಕಲಿಕೆ
Last Updated 16 ಅಕ್ಟೋಬರ್ 2020, 6:41 IST
ಅಕ್ಷರ ಗಾತ್ರ

ಲಂಡನ್‌: ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಈ ಕಾಲಘಟ್ಟದಲ್ಲಿ ಬದಲಾಗಿರುವ ಪರಿಸ್ಥಿತಿಗೆ ತಕ್ಕಂತೆ ಬ್ರಿಟನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ‘ಆನ್‌ಲೈನ್‌ ಮತ್ತು ವ್ಯಕ್ತಿಗತ ಬೋಧನಾ ಸಂಯೋಜನೆಯ ಕಲಿಕಾ ವಿಧಾನಕ್ಕೆ’ ಹೊಂದಿಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಸುರಕ್ಷಿತ ಹಾಗೂ ಯಶಸ್ವಿಯಾಗಿ ಬ್ರಿಟನ್‌ ತಲುಪಿರುವ ಭಾರತೀಯ ವಿದ್ಯಾರ್ಥಿಗಳು ಅಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಆನ್‌ಲೈನ್ ಮತ್ತು ವ್ಯಕ್ತಿಗತ (ಇನ್‌–ಪರ್ಸನ್‌ ಟೀಚಿಂಗ್‌) ಬೋಧನೆ ಎರಡೂ ವಿಧಾನದಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.

ಬ್ರಿಟನ್‌‌ನಾದ್ಯಂತ ಇರುವ 139 ವಿಶ್ವವಿದ್ಯಾಲಯಗಳು ಇತ್ತೀಚೆಗೆ ನೀಡಿರುವ ದತ್ತಾಂಶಗಳ ಮತ್ತು ಒಳನೋಟದ ಪ್ರಕಾರ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಬ್ರಿಟನ್‌ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿದ್ದಾರೆ.

2020–21ರ ಶೈಕ್ಷಣಿಕ ವೈರ್ಷದ ತರಗತಿಗಳು ಆರಂಭವಾಗಿದ್ದು, ಭಾರತ ಸೇರಿದಂತೆ ಎಲ್ಲ ವಿದೇಶಿ ವಿದ್ಯಾರ್ಥಿಗಳಿಗೆ ಸೂಕ್ತ ಬೆಂಬಲ ನೀಡುವಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬ್ರಿಟನ್‌ ವಿಶ್ವವಿದ್ಯಾಲಯಗಳು ತಿಳಿಸಿವೆ.

ರಾಷ್ಟ್ರೀಯ ಭಾರತೀಯ ವಿದ್ಯಾರ್ಥಿಗಳು ಮತ್ತು ಬ್ರಿಟನ್‌ ಅಲುಮಿನಿ ಯೂನಿಯನ್‌ ಮಾಡಿರುವ ವಿಶ್ಲೇಷಣೆ ಪ್ರಕಾರ, ‘ಶೇ 40ರಷ್ಟು ಭಾರತೀಯ ವಿದ್ಯಾರ್ಥಿಗಳು ಆನ್‌ಲೈನ್ ಮತ್ತು ವ್ಯಕ್ತಿಗತ ಬೋಧನಾ ಸಂಯೋಜನೆ ಕಲಿಕೆಯನ್ನು ಒಪ್ಪಿಕೊಂಡಿದ್ದಾರೆ. ಅಷ್ಟೇ ಪ್ರಮಾಣದ ವಿದ್ಯಾರ್ಥಿಗಳಿಗೆ ಈ ಕಲಿಕೆ ಬಗ್ಗೆ ಅಸಮಾಧಾನವೂ ಇದೆ. ಬಹುಶಃ ಮುಂದಿನ ದಿನಗಳಲ್ಲಿ ಬೋಧನಾ ವಿಧಾನದಲ್ಲಿ ಸುಧಾರಣೆ ಕಾಣಬಹುದು’ ಎಂದು ಅಭಿಪ್ರಾಯಪಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT