ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಥಳಿಸಿದ ಉಕ್ರೇನ್ ಯೋಧರು

Last Updated 28 ಫೆಬ್ರುವರಿ 2022, 11:32 IST
ಅಕ್ಷರ ಗಾತ್ರ

ಕೀವ್/ತಿರುವನಂತಪುರ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಭಾನುವಾರ ಪೋಲೆಂಡ್‌ ಗಡಿಯತ್ತ ತೆರಳುತ್ತಿದ್ದಾಗ ಉಕ್ರೇನ್‌ ಭದ್ರತಾ ಪಡೆಗಳು ದೇಶ ತೊರೆಯದಂತೆ ತಡೆದು, ಥಳಿಸಿರುವ ಘಟನೆಗಳು ವರದಿಯಾಗಿವೆ.

ಉಕ್ರೇನ್-ಪೋಲೆಂಡ್ ಗಡಿಯಲ್ಲಿರುವ ಶೆಹಿನಿಯಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಲಯಾಳಿ ವಿದ್ಯಾರ್ಥಿಗಳನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ತಡೆದು, ಥಳಿಸಿದ್ದಾರೆ.

ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿರುವ ವಿಡಿಯೊ ತುಣುಕನ್ನು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.

‘ನನ್ನನ್ನು ಸಹ ಮಿಲಿಟರಿ ಸಿಬ್ಬಂದಿ ಥಳಿಸಿ, ರಸ್ತೆಗೆ ತಳ್ಳಿದರು. ನನ್ನ ಸ್ನೇಹಿತನೊಬ್ಬ ಪ್ರಶ್ನಿಸಿದ್ದಕ್ಕೆ ಅವನಿಗೂ ಹೊಡೆದು ರಸ್ತೆಗೆ ತಳ್ಳಿದರು’ ಎಂದು ವಿದ್ಯಾರ್ಥಿನಿ ಏಂಜಲ್ ಹೇಳಿದ್ದಾರೆ.

ಈ ಕುರಿತ ವಿಡಿಯೊಗಳನ್ನು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT