ದುಬೈ: ನಾಪತ್ತೆಯಾಗಿದ್ದ ಭಾರತ ಮೂಲದ ಬಾಲಕಿ ತನ್ನದೇ ಮನೆಯ ಟೆರೆಸ್ನಲ್ಲಿ ಪತ್ತೆ

ದುಬೈ: ನಾಪತ್ತೆಯಾಗಿದ್ದ ಭಾರತ ಮೂಲದ 15 ವರ್ಷದ ಬಾಲಕಿ ಮನೆಯ ಟೆರೇಸ್ನಲ್ಲಿ ಪತ್ತೆಯಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ದುಬೈನಲ್ಲಿ ಗುರುವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಹರಿಣಿ ಕರಾಣಿ ನಾಪತ್ತೆಯಾಗಿದ್ದಾಳೆ ಎಂದು ‘ಗಲ್ಫ್ ನ್ಯೂಸ್’ ವರದಿ ಮಾಡಿತ್ತು.
‘ಶಾಲೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾಳೆ ಎಂಬ ಕಾರಣಕ್ಕೆ ಹರಿಣಿಯನ್ನು ಪೋಷಕರು ಗದರಿಸಿದ್ದರು. ಆಕೆಯ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಂಡಿದ್ದರು. ಇದರಿಂದ ಬೇಸರಗೊಂಡ ಬಾಲಕಿ, ತನ್ನದೇ ಮನೆಯ ಟೆರೇಸ್ನಲ್ಲಿ ಅವಿತು ಕುಳಿತಿದ್ದಳು’ ಎಂದು ವರದಿಗಳು ಹೇಳಿವೆ.
ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅಲ್ಲದೆ ಮಗಳನ್ನು ಹುಡುಕುವಲ್ಲಿ ಸಹಾಯ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು.
‘ದುಬೈ ಪೊಲೀಸರು ಕೆಲವೇ ಗಂಟೆಗಳಲ್ಲಿ ಈ ಪ್ರಕರಣವನ್ನು ಭೇದಿಸಿ, ಹರಿಣಿಯನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ’ ಎಂದು ವರದಿಯಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.