ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನಡಾ ಗಡಿಯಲ್ಲಿ ಭಾರತೀಯರೂ ಸೇರಿ 8 ಮಂದಿ ವಲಸಿಗರ ಮೃತದೇಹ ಪತ್ತೆ

Last Updated 1 ಏಪ್ರಿಲ್ 2023, 4:09 IST
ಅಕ್ಷರ ಗಾತ್ರ

ವಾಷಿಂಗ್ಟನ್: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿ 8 ಜನರು ಮೃತಪಟ್ಟಿದ್ದು, ಅದರಲ್ಲಿ ಭಾರತೀಯ ಕುಟುಂಬದ ಸದಸ್ಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆನಡಾದ ಕೋಸ್ಟ್ ಗಾರ್ಡ್‌ನ ವೈಮಾನಿಕ ಶೋಧದ ಸಮಯದಲ್ಲಿ ಕ್ವಿಬೆಕ್‌ನ ಜವುಗು ಪ್ರದೇಶದಲ್ಲಿ ಮುಳುಗಿದ್ದ ಬೋಟ್‌ನಿಂದ ಪೊಲೀಸರು 8 ಶವಗಳನ್ನು ಹೊರತೆಗೆದಿದ್ದಾರೆ.

‘ಮೃತರೆಲ್ಲರೂ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದರು’ ಎಂದು ತಿಳಿದುಬಂದಿದೆ.

ಪತ್ತೆಯಾದ ಶವಗಳಲ್ಲಿ ಒಂದು ಮೂರು ವರ್ಷದೊಳಗಿನ ಮಗುವಿನದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಮಗುವಿನ ಮೃತದೇಹದ ಜೊತೆ ಕೆನಡಾದ ಪಾಸ್‌ಪೋರ್ಟ್‌ ಪತ್ತೆಯಾಗಿದೆ. ಮಗು ರೊಮೇನಿಯಾ ಕುಟುಂಬದ್ದಾಗಿದೆ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT