ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್–ರಷ್ಯಾ ಮಾತುಕತೆ: ಮೋದಿ ಪ್ರಮುಖ ಪಾತ್ರವಹಿಸಬಲ್ಲರು

Last Updated 21 ಜನವರಿ 2023, 12:28 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಉಕ್ರೇನ್ ಮತ್ತು ರಷ್ಯಾ ನಡುವೆ ಮಾತುಕತೆಗೆ ಯಾರಾದರೂ ವೇದಿಕೆ ಸಿದ್ಧಗೊಳಿಸಬೇಕು. ಈ ವಿಷಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಬಲ್ಲರು ಎಂದು ಹಿರಿಯ ಫ್ರೆಂಚ್ ಪತ್ರಕರ್ತೆ ಲಾರಾ ಹೈಮ್ ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ಉಭಯ ದೇಶಗಳ ನಡುವೆ ಮಾತುಕತೆ ನಡೆಯುವುದು ಕಷ್ಟ ಎಂದು ಹೇಳಿದ್ದಾರೆ. ಪ್ರಸ್ತುತ ಅವರು ಎಲ್‌ಸಿಐ ಸುದ್ದಿ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

‘ರಷ್ಯಾದೊಂದಿಗೆ ಚರ್ಚೆ ನಡೆಸಲು ಉಕ್ರೇನ್ ಬಯಸುವುದಿಲ್ಲ. ಅಲ್ಲದೇ, ಯುದ್ಧ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕ್ರಮ ಕುರಿತು ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತೀರ್ಪು ಪ್ರಕಟಿಸಲಿ ಎಂಬುದು ಉಕ್ರೇನ್‌ನ ಬಯಕೆಯಾಗಿದೆ’ ಎಂದು ಹೇಳಿದ್ದಾರೆ.

‘ಅಮೆರಿಕದಲ್ಲಿ ಜನರು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಗ್ಗೆ ಮಾತನಾಡುತ್ತಿಲ್ಲ. ಇದು ನನಗೆ ಅಚ್ಚರಿ ಮೂಡಿಸಿದೆ. ಆದರೆ, ಉಕ್ರೇನ್ ಯುದ್ಧ ಅತ್ಯಂತ ದೀರ್ಘವಾಗಿರಲಿದೆ. ಯುರೋಪಿನಿಂದ ಬಂದ ನನಗೆ, ಅಮೆರಿಕದಲ್ಲಿ ಏನಾಗುತ್ತಿದೆ ಎಂದು ಹೇಳಲು ಮಾತುಗಳೇ ಹೊರಡುತ್ತಿಲ್ಲ. ಇಲ್ಲಿಯ ಜನರು ಅಧ್ಯಕ್ಷ ಬೈಡನ್, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಯುರೋಪ್‌ನಲ್ಲಿ ಜನರು ಯುದ್ಧ ಬಗ್ಗೆ ಮತ್ತು ಏನು ನಡೆಯುತ್ತಿದೆ ಎಂಬುದರ ಬಗ್ಗೆ ಮಾತನಾಡುತ್ತಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT