ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಉಲ್ಬಣ, ಆಮ್ಲಜನಕ ಕೊರತೆಯಿಂದ ಇಂಡೊನೇಷ್ಯಾ ತತ್ತರ

Last Updated 3 ಜುಲೈ 2021, 10:06 IST
ಅಕ್ಷರ ಗಾತ್ರ

ಜಕಾರ್ತ: ಇಂಡೊನೇಷ್ಯಾದಲ್ಲಿ ಕೋವಿಡ್‌ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಒಂದೆಡೆ ಲಸಿಕೆ ನೀಡುವ ಕಾರ್ಯಕ್ರಮ ನಿಧಾನಗತಿಯಲ್ಲಿ ಸಾಗಿದೆ. ಇನ್ನೊಂದೆಡೆ ಪ್ರಕರಣಗಳು ಹೆಚ್ಚುತ್ತಿದ್ದು, ಆಮ್ಲಜನಕ ಕೊರತೆಯೂ ಉಂಟಾಗಿದೆ. ಆಮ್ಲಜನಕ ಸಿಲಿಂಡರ್‌ಗಳನ್ನು ರೋಗಿಗಳ ಕುಟುಂಬಗಳೇ ತರಬೇಕು ಎಂದು ಕೆಲವು ಆಸ್ಪತ್ರೆಗಳು ತಾಕೀತು ಮಾಡುತ್ತಿವೆ ಎಂದು ಮೂಲಗಳು ಹೇಳಿವೆ.

ಜಾಗತಿಕ ಮಟ್ಟದಲ್ಲಿ ಲಸಿಕೆ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಮತ್ತು ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿರುವುದು ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲು ಕಾರಣ ಎನ್ನಲಾಗಿದೆ. ಮೇ ತಿಂಗಳಲ್ಲಿ ಈದ್‌ ರಜಾದಿನಗಳಲ್ಲಿ ಕೆಲವರು ಇತರ ದೇಶಗಳಿಗೆ ಪ್ರವಾಸ ಕೈಗೊಂಡಿರುವುದು, ಡೆಲ್ಟಾ ತಳಿ ಸೋಂಕು ಪ್ರಸರಣ ಕೂಡ ಏಕಾಏಕಿ ಕೋವಿಡ್‌ ಪ್ರಕರಣಗಳು ಹೆಚ್ಚಲು ಮತ್ತೊಂದು ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT