ಸೋಮವಾರ, ಏಪ್ರಿಲ್ 19, 2021
23 °C

ಇಂಡೊನೇಷ್ಯಾದಲ್ಲಿ ಭೂಕುಸಿತ: ಮೃತರ ಸಂಖ್ಯೆ 126ಕ್ಕೆ ಏರಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಲೆಂಬಾಟಾ, ಇಂಡೊನೇಷ್ಯಾ: ಪೂರ್ವ ಇಂಡೊನೇಷ್ಯಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮೃತರ ಸಂಖ್ಯೆ 126ಕ್ಕೆ ಏರಿದೆ. ಇನ್ನೂ ಹಲವಾರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಈ ಪ್ರದೇಶದಲ್ಲಿ ಇನ್ನೂ ಮಳೆ ಬೀಳುತ್ತಿದ್ದು, ಪರಿಹಾರ ಕಾರ್ಯ ಹಾಗೂ ನಾಪತ್ತೆಯಾಗಿರುವವರನ್ನು ಹುಡುಕುವುದಕ್ಕೆ ತೊಂದರೆಯಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಪ್ರವಾಹದಿಂದಾಗಿ ಇಂಡೊನೇಷ್ಯಾದ ಫ್ಲೋರ್ಸ್‌ ದ್ವೀಪದಿಂದ ಪೂರ್ವ ಟಿಮೋರ್‌ವರೆಗೆ ವ್ಯಾಪಿಸಿರುವ ದ್ವೀಪಗಳಲ್ಲಿ ತೀವ್ರ ಹಾನಿಯಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಪೂರ್ವ ಫ್ಲೋರ್ಸ್ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇಲ್ಲಿ ಈ ವರೆಗೆ 67 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 6 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು