ಇಂಡೊನೇಷ್ಯಾ: ಜ್ವಾಲಾಮುಖಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ

ಜಕಾರ್ತ: ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಸಂಭವಿಸಿದ ಜ್ವಾಲಾಮುಖಿ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಅನೇಕರು ನಾಪತ್ತೆಯಾಗಿದ್ದಾರೆ.
ಸಿಮೇರು ಸಮೀಪದ ಲುಮಾಜಾಂಗ್‌ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ.
ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆರೊಬೊಕನ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 14 ಮೃತದೇಹಗಳು ಪತ್ತೆಯಾಗಿವೆ.
41 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್ ಅಧಿಕಾರಿಗಳು ತಿಳಿಸಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.