ಭಾನುವಾರ, ಅಕ್ಟೋಬರ್ 24, 2021
25 °C

ತಾಲಿಬಾನ್‌ ಜೊತೆ ಮಾತುಕತೆ: ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಅಂತರರಾಷ್ಟ್ರೀಯ ಸಮುದಾಯಗಳು ತಾಲಿಬಾನ್‌ ಜೊತೆ ಮಾತುಕತೆ ನಡೆಸಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಬುಧವಾರ ಪ್ರತಿಪಾದಿಸಿದ್ದಾರೆ.

ಎಲ್ಲಾ ಬಣಗಳನ್ನು ಒಟ್ಟುಗೂಡಿಸಿ, ಎಲ್ಲರನ್ನೂ ಒಳಗೊಂಡ ಸರ್ಕಾರವನ್ನು ತಾಲಿಬಾನ್‌ ರಚಿಸಿದರೆ, 40 ವರ್ಷಗಳ ಬಳಿಕ ಅಫ್ಗಾನಿಸ್ತಾನದಲ್ಲಿ ಶಾಂತಿ ನೆಲೆಸಿದಂತೆ ಆಗುತ್ತದೆ. ಆದರೆ ಈ ಪ್ರಕ್ರಿಯೆಯಲ್ಲಿ ತಪ್ಪುಗಳು ಉಂಟಾದರೆ ದೇಶ ಅರಾಜಕತೆಗೆ ಹೋಗುತ್ತದೆ;
ಅತಿದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗುತ್ತದೆ, ನಿರಾಶ್ರಿತರ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ಭಯೋತ್ಪಾದನೆ ಮತ್ತೆ ನೆಲೆ ಕಂಡುಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಮಾಧ್ಯಮವೊಂದರ ಎದುರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು