ಗುರುವಾರ , ಆಗಸ್ಟ್ 5, 2021
21 °C

ಯೋಗದ ಮೂಲ ಭಾರತವಲ್ಲ ನೇಪಾಳ: ಕೆ.ಪಿ.ಶರ್ಮಾ ಒಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕಠ್ಮಂಡು: ಯೋಗವು ನೇಪಾಳದಲ್ಲಿ ಆರಂಭವಾಗಿದೆ. ಯೋಗವು ಆರಂಭವಾದಾಗ ಭಾರತವೇ ಇರಲಿಲ್ಲ ಎಂದು ನೇಪಾಳದ ಹಂಗಾಮಿ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೇಳಿದ್ದಾರೆ.

‘ಯೋಗವು ನೇಪಾಳದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಆ ಸಂದರ್ಭದಲ್ಲಿ ಭಾರತವೇ ಇರಲಿಲ್ಲ. ಅದು ಎರಡಾಗಿ ವಿಭಜನೆಯಾಗಿತ್ತು’ ಎಂದು ಅವರು ಹೇಳಿದ್ದಾರೆ.

ಓದಿ: 

ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ತಮ್ಮ ನಿವಾಸದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ತಜ್ಞರು ಸತ್ಯವನ್ನು ಮರೆಮಾಚುತ್ತಿದ್ದಾರೆ ಎಂದಿದ್ದಾರೆ.

ಭಾರತ ಎಂಬುದು ಹಿಂದೆ ಇರಲೇ ಇಲ್ಲ. ಎರಡು ಬಣಗಳಾಗಿ ಇದ್ದ ಭಾರತವು ಆಗ ಖಂಡ ಮತ್ತು ಉಪಖಂಡದಂತೆ ಇತ್ತು ಎಂದು ಒಲಿ ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

2015ರಿಂದ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಬಗ್ಗೆ 2014ರಲ್ಲಿ ವಿಶ್ವಸಂಸ್ಥೆಯು ಘೋಷಣೆ ಹೊರಡಿಸಿತ್ತು.

ಓದಿ: 

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಪರಿಗಣಿಸುವಂತೆ ವಿಶ್ವಸಂಸ್ಥೆಗೆ ಸಲಹೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು