ಇರಾನ್: ಹಿಜಾಬ್, ವಸ್ತ್ರಸಂಹಿತೆ ವಿರೋಧಿ ಹೋರಾಟ; ಆಸ್ಕರ್ ನಟಿಯ ಬಂಧನ

ಟೆಹರಾನ್: ದೇಶದಾದ್ಯಂತ ನಡೆಯುತ್ತಿರುವ ಹಿಜಾಬ್ ಹಾಗೂ ವಸ್ತ್ರಸಂಹಿತೆ ವಿರೋಧಿ ಹೋರಾಟದಲ್ಲಿ ಭಾಗವಹಿಸಿರುವ ಆಸ್ಕರ್ ಪ್ರಶಸ್ತಿ ಪಡೆದಿರುವ ಸಿನಿಮಾದಲ್ಲಿ ಅಭಿನಯಿಸಿರುವ ನಟಿ ಟೆರಾಹ್ನೆ ಅಲಿದೊಸ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಟಿ ಅಲಿದೋಸ್ತಿ (38) ಕಳೆದ ಮೂರು ತಿಂಗಳಿಂದ ಹಿಜಾಬ್ ವಿರೋಧಿ ಹೋರಾಟದಲ್ಲಿ ಸಕ್ರಿಯರಾಗಿದ್ದಾರೆ. ಹಿಜಾಬ್ ಕಡ್ಡಾಯ ಕಾನೂನಿನ ಬದಲಾವಣೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಹಲವು ಪೋಸ್ಟ್‌ಗಳನ್ನು ಹಾಕುತ್ತಿದ್ದರು.
ಶನಿವಾರ ಇರಾನ್ ಪೋಸರು ನಟಿಯನ್ನು ಬಂಧಿಸಿದ್ದಾರೆ. ಆದರೆ ಅವರನ್ನು ಯಾವ ಕಾರಾಗೃಹದಲ್ಲಿ ಇರಿಸಿದ್ದಾರೆ ಎಂಬುದು ತಿಳಿದುಬಂದಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಲಿದೊಸ್ತಿ ನಟಿಸಿದ್ದ ‘ದಿ ಸೆಲ್ಸ್‌ಮ್ಯಾನ್‘ ಸಿನಿಮಾ 2016ರಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿತ್ತು.
ವಸ್ತ್ರಸಂಹಿತೆ ಹಾಗೂ ಹಿಜಾಬ್ ವಿರೋಧಿ ಹೋರಾಟದಲ್ಲಿ ತೊಡಗಿರುವವರಲ್ಲಿ ಇರಾನ್ ಸರ್ಕಾರ ಈಗಾಗಲೇ ಕನಿಷ್ಠ 12 ಮಂದಿಯನ್ನು ಮರಣದಂಡನೆಗೆ ಗುರಿಪಡಿಸಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಕನಿಷ್ಠ 488 ಜನರನ್ನು ಹತ್ಯೆ ಮಾಡಿದೆ ಮತ್ತು 18,200 ಜನರನ್ನು ಬಂಧಿಸಿದೆ ಎಂದು ಇರಾನ್ ಮಾನವ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.