ಶುಕ್ರವಾರ, ಜನವರಿ 27, 2023
19 °C

ಇರಾನ್‌ ಜೈಲಿನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ದುಬೈ: ಇರಾನ್‌ನ ಟೆಹ್ರಾನ್‌ನಲ್ಲಿರುವ ಎವಿನ್‌ ಜೈಲಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

‘ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೆಲವರು ಭಾನುವಾರ ಅಸುನೀಗಿದ್ದಾರೆ. ಮೃತಪಟ್ಟವರೆಲ್ಲರ ಮೇಲೂ ಕಳ್ಳತನದ ಆರೋಪವಿತ್ತು. ಇನ್ನೂ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಇರಾನ್‌ ನ್ಯಾಯಾಂಗದ ಸುದ್ದಿ ಸಂಸ್ಥೆ ‘ವಿಜಾನ್‌’ ಸೋಮವಾರ ತಿಳಿಸಿದೆ.

ಜೈಲಿನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕೈದಿಗಳ ನಡುವಣ ಜಗಳವೇ ಕಾರಣ ಎಂದು ಹೇಳಿರುವ ಸುದ್ದಿಸಂಸ್ಥೆಯು ಇದನ್ನು ಸಾಬೀತುಪಡಿಸಲು ಅಗತ್ಯವಿರುವ ಸಾಕ್ಷ್ಯಗಳನ್ನು ಒದಗಿಸಿಲ್ಲ.

ಮಹಸ ಅಮಿನಿ ಸಾವು ಖಂಡಿಸಿ ಇರಾನ್‌ನಲ್ಲಿ ನಡೆಯುತ್ತಿರುವ ಹೋರಾಟವು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು