ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್: ಯೋಧನ ಹತ್ಯೆ ಪ್ರಕರಣ, ಐವರಿಗೆ ಮರಣ ದಂಡನೆ

Last Updated 6 ಡಿಸೆಂಬರ್ 2022, 12:38 IST
ಅಕ್ಷರ ಗಾತ್ರ

ಟೆಹರಾನ್: ವಸ್ತ್ರಸಂಹಿತೆ ವಿರೋಧಿಸಿ ದೇಶದಾದ್ಯಂತ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಅರೆಸೇನಾಪಡೆಯ ಯೋಧನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐದು ಜನರಿಗೆ ಮರಣ ದಂಡನೆ ವಿಧಿಸಲಾಗಿದೆ ಎಂದು ಇರಾನ್‌ನ ನ್ಯಾಯಾಂಗ ಇಲಾಖೆ ಮಂಗಳವಾರ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ, ಮೂವರು ಮಕ್ಕಳು ಸೇರಿ ಇತರ 11 ಜನರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ನ್ಯಾಯಾಂಗ ಇಲಾಖೆ ವಕ್ತಾರ ಮಸೌದ್ ಸೆತಯೇಶಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕರಾಜ್‌ ನಗರದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ನವೆಂಬರ್‌ 3ರಂದು ಗುಂಪೊಂದು ದಾಳಿ ನಡೆಸಿ ರುಹೊಲ್ಲಾ ಅಜಾಮಿಯಾನ್ ಎಂಬ ಅರೆಸೇನಾ ಪಡೆ ಯೋಧನನ್ನು ಹತ್ಯೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 15 ಜನರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು’ ಎಂದು ನ್ಯಾಯಾಂಗ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ವಸ್ತ್ರಸಂಹಿತೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹದೀಸ್‌ ನಜಾಫಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಮೃತ ಮಹಿಳೆಗೆ ಶ್ರದ್ಧಾಂಜಲಿ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಗಲಭೆ ನಡೆದು, ಗುಂಪೊಂದು ರುಹೊಲ್ಲಾ ಮೇಲೆ ಹಲ್ಲೆ ನಡೆಸಿ ಅವರನ್ನು ಹತ್ಯೆ ಮಾಡಿತ್ತು ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT