ಇರಾಕ್‌ನಲ್ಲಿ ಐಎಸ್ ಜಿಹಾದಿಗಳ ದಾಳಿ: 13 ಪೊಲೀಸ್ ಅಧಿಕಾರಿಗಳ ಸಾವು

ಕಿರ್‌ಕುಕ್ (ಇರಾಕ್): ‘ಇರಾಕ್‌ನ ಕಿರ್‌ಕುಕ್‌ನ ಬಳಿಯಿರುವ ಚೆಕ್‌ಪಾಯಿಂಟ್‌ನಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದ್ದು, ಇದರಲ್ಲಿ 13 ಮಂದಿ ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ’ ಎಂದು ವೈದ್ಯಕೀಯ ಮತ್ತು ಭದ್ರತಾ ಮೂಲಗಳು ತಿಳಿಸಿವೆ.
‘ಫೆಡರಲ್ ಪೊಲೀಸ್ ಚೆಕ್ ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಇಸ್ಲಾಮಿಕ್ ಸ್ಟೇಟ್‌ನ ಉಗ್ರರು ದಾಳಿ ನಡೆಸಿದ್ದಾರೆ. ಆದರೆ, ಈ ದಾಳಿಯ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿಲ್ಲ’ ಎಂದು ಅವರು ತಿಳಿಸಿದರು.
‘ಈ ಪ್ರದೇಶದಲ್ಲಿ ಇರಾಕ್ ಸೇನೆ ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಇಸ್ಲಾಮಿಕ್ ಸ್ಟೇಟ್‌ನ ಉಗ್ರರು ದಾಳಿ ನಡೆಸಿದ್ದಾರೆ. ಇದು ಈ ವರ್ಷದ ಅತ್ಯಂತ ಮಾರಣಾಂತಿಕ ದಾಳಿಯಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎಫ್‌ಪಿಗೆ ಮಾಹಿತಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.