ಶುಕ್ರವಾರ, ಜನವರಿ 27, 2023
19 °C

ಪಾಕ್‌ ರಾಯಭಾರಿ ಕಚೇರಿ ಮೇಲೆ ದಾಳಿ: ಐಎಸ್ ಶಂಕಿತನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಅಘ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿನ ಪಾಕಿಸ್ತಾನಿ ರಾಯಭಾರ ಕಚೇರಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಗುಂಡಿನ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

‘ಐಎಸ್‌ ಶಂಕಿತನನ್ನು ಬಂಧಿಸಲಾಗಿದೆ. ಕೆಲ ವಿದೇಶಿ ಶಕ್ತಿಗಳು ದಾಳಿ ಹಿಂದೆ ಇವೆ. ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವುದು ಇದರ ಉದ್ದೇಶವಾಗಿತ್ತು’ ಎಂದು ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಸೋಮವಾರ ಟ್ವೀಟ್‌ ಮಾಡಿದ್ದಾರೆ.

ಸಮೀಪದ ಕಟ್ಟಡವೊಂದರಿಂದ ರಾಯಭಾರ ಕಚೇರಿಯ ಮೇಲೆ ಗುಂಡು ಹಾರಿಸಲಾಗಿತ್ತು. ಇದು ದಕ್ಷಿಣ ಏಷ್ಯಾದ ಎರಡು ನೆರೆಹೊರೆಯವರ ನಡುವೆ ಉದ್ವಿಗ್ನತೆ ಹೆಚ್ಚಿಸಿತ್ತು.

ದಾಳಿ ನಡೆದ ವೇಳೆ ಕಾಬೂಲ್‌ನಲ್ಲಿರುವ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರು ರಾಯಭಾರ ಕಚೇರಿಯ ಕಾಂಪೌಂಡ್‌ ಒಳಗಿನ ಹುಲ್ಲುಹಾಸಿನ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಆದರೆ, ಅವರಿಗೆ ಹಾನಿಯಾಗಲಿಲ್ಲ. ಭದ್ರತಾ ಸಿಬ್ಬಂದಿ ಒಬ್ಬರು ಗಾಯಗೊಂಡರು.

ಖೊರಾಸಾನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆ ಮತ್ತು ಅಫ್ಗಾನಿಸ್ತಾನದ ಆಡಳಿತಾರೂಢ ತಾಲಿಬಾನ್‌ನ ಪ್ರತಿಸ್ಪರ್ಧಿ ಶುಕ್ರವಾರದ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.

‘ತನ್ನ ಇಬ್ಬರು ಹೋರಾಟಗಾರರು ರಾಯಭಾರ ಕಚೇರಿ ಅಂಗಳದಲ್ಲಿದ್ದ ಪಾಕಿಸ್ತಾನಿ ರಾಯಭಾರಿ ಮತ್ತು ಅವನ ಭದ್ರತಾ ಪಡೆ ಮೇಲೆ ದಾಳಿ ನಡೆಸಿದರು’ ಇಸ್ಲಾಮಿಕ್ ಸ್ಟೇಟ್ ಗ್ರೂಪ್ ಹೇಳಿದೆ. ಆದರೆ, ಹೆಚ್ಚಿನ ವಿವರಗಳನ್ನು ನೀಡಿಲ್ಲ.

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು