ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ಉಗ್ರ ಸಂಘಟನೆ ಐಸಿಸ್‌ನಲ್ಲಿ 66 ಭಾರತೀಯರು: ಅಮೆರಿಕ ವರದಿ

Last Updated 17 ಡಿಸೆಂಬರ್ 2021, 11:21 IST
ಅಕ್ಷರ ಗಾತ್ರ

ವಾಷಿಂಗ್ಟನ್: ಜಾಗತಿಕ ಉಗ್ರ ಸಂಘಟನೆ ಐಎಸ್‌ಐಎಸ್‌ನಲ್ಲಿ ಭಾರತದ 66 ಜನ ಹೋರಾಟಗಾರರು ಇದ್ದಾರೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿದೆ.

ಜಾಗತಿಕ ಭಯೋತ್ಪಾದನೆ ಕುರಿತು ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.

‘ಭಯೋತ್ಪಾದನೆಗೆ ಸಂಬಂಧಿಸಿದ 34 ಪ್ರಕರಣಗಳ ಕುರಿತು ಎನ್‌ಐಎ ತನಿಖೆ ನಡೆಸಿದೆ. ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ 160 ಮಂದಿಯನ್ನು ಬಂಧಿಸಿದೆ. ಈ ಪೈಕಿ 10 ಜನರು ಅಲ್‌ ಕೈದಾ ಜೊತೆ ನಂಟು ಹೊಂದಿದ್ದರು ಎಂಬ ಆರೋಪಗಳಿವೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಭಯೋತ್ಪಾದನೆ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟವನ್ನು ವರದಿಯಲ್ಲಿ ಶ್ಲಾಘಿಸಲಾಗಿದೆ. ಎನ್‌ಐಎ ಸೇರಿದಂತೆ ಭಯೋತ್ಪಾದನೆ ನಿಗ್ರಹ ಪಡೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT