ಮಂಗಳವಾರ, ಜುಲೈ 5, 2022
27 °C

ಇಸ್ರೇಲ್‌ನಲ್ಲಿ 1989ರ ಬಳಿಕ ಮೊದಲ ಪೋಲಿಯೊ ಪ್ರಕರಣ ಪತ್ತೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಜೆರುಸಲೇಂ: 4 ವರ್ಷದ ಮಗುವೊಂದರಲ್ಲಿ ಪೋಲಿಯೊ ಪತ್ತೆಯಾಗಿರುವುದಾಗಿ ಇಸ್ರೇಲ್ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. 1989ರ ಬಳಿಕ ದೇಶದಲ್ಲಿ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಸರ್ಕಾರವೇ ವಾಡಿಕೆಯಂತೆ ನಡೆಸುವ ಪೋಲಿಯೊ ಲಸಿಕೆ ಅಭಿಯಾನದ ವೇಳೆ, ಈ ಮಗುವಿಗೆ ಲಸಿಕೆ ಹಾಕಿಸಿಲ್ಲ ಎಂದು ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ.

ಸದ್ಯದ ಪ್ರಕರಣದಲ್ಲಿ ಪತ್ತೆಯಾಗಿರುವುದು ವೈರಸ್‌ನ ರೂಪಾಂತರ ತಳಿಯಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೂ ರೋಗ ಹರಡುವ ಸಾಧ್ಯತೆ ಇದೆ ಎಂದೂ ಎಚ್ಚರಿಕೆ ನೀಡಿದೆ.

ಪ್ರಕರಣ ಪತ್ತೆಯಾದ ಬಳಿಕ ಎಚ್ಚೆತ್ತುಕೊಂಡಿರುವ ಆರೋಗ್ಯ ಸಚಿವಾಲಯ, ಅಭಿಯಾನಗಳ ಸಂದರ್ಭ ಲಸಿಕೆ ಹಾಕಿಸಿಕೊಳ್ಳದವರಿಗೆ, ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು