ಜೆರುಸಲೇಮ್: ಹಮಾಸ್ ಉಗ್ರರು ಶುಕ್ರವಾರ ರಾತ್ರಿ ನಡೆಸಿದ ಬಾಂಬ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ಸೈನ್ಯವು ರಾಕೆಟ್ ದಾಳಿ ನಡೆಸಿದೆ.
'ನಮ್ಮ ಯುದ್ಧ ವಿಮಾನಗಳು ಗಾಜಾದ ಹಮಾಸ್ ಉಗ್ರತಾಣಗಳ ಮೇಲೆ ದಾಳಿ ನಡೆಸಿವೆ' ಎಂದು ಇಸ್ರೇಲ್ ಸೇನೆಯ ವಕ್ತಾರರು ಶನಿವಾರ ಬೆಳಿಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇಸ್ರೇಲ್ ಜೈಲಿನಿಂದ ತಪ್ಪಿಸಿಕೊಂಡಿದ್ದ ಇಬ್ಬರು ಹಮಾಸ್ ಉಗ್ರರನ್ನು ಪೊಲೀಸರು ಸೆರೆಹಿಡಿದ ಕೆಲವೇ ಗಂಟೆಗಳಲ್ಲಿ ದಾಳಿ ಮತ್ತು ಪ್ರತಿದಾಳಿಗಳು ನಡೆದಿವೆ ಎಂದು ತಿಳಿದುಬಂದಿದೆ.
ಮೇ ತಿಂಗಳಲ್ಲಿ ಹಮಾಸ್ ಉಗ್ರರು ಹಾಗೂ ಇಸ್ರೇಲ್ ಮಿಲಿಟರಿ ಮಧ್ಯೆ 11 ದಿನಗಳ ಕಾಲ ಸಂಘರ್ಷ ನಡೆದಿತ್ತು. ನಂತರ, ಕದನ ವಿರಾಮ ಘೋಷಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.