ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಇಸ್ರೇಲ್‌ನಲ್ಲಿ ಮತ್ತೊಮ್ಮೆ ಲಾಕ್‌ಡೌನ್‌

Last Updated 14 ಸೆಪ್ಟೆಂಬರ್ 2020, 6:16 IST
ಅಕ್ಷರ ಗಾತ್ರ

ಜೆರುಸಲೆಂ: ‘ಕೊರೊನಾ ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ದೇಶದಲ್ಲಿ ಲಾಕ್‌ಡೌನ್‌ ಹೇರಲಾಗುವುದು’ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಭಾನುವಾರ ತಿಳಿಸಿದ್ದಾರೆ.

‘ಶಾಲೆ, ರೆಸ್ಟೋರೆಂಟ್‌ ಮತ್ತು ಹೋಟೆಲ್‌ಗಳನ್ನು ಮುಚ್ಚಲಾಗುತ್ತದೆ. ಈ ವೇಳೆಯಲ್ಲಿ ಜನರ ಸಂಚಾರಕ್ಕೆ ಅವಕಾಶ ಇಲ್ಲ. ಕೊರೊನಾ ಸೋಂಕಿನ ಪ್ರಸರಣವನ್ನು ತಡೆಯುವುದೇ ಇದರ ಉದ್ದೇಶ’ ಎಂದು ಅವರು ಹೇಳಿದ್ದಾರೆ.

‘ಈ ನಿರ್ಧಾರದಿಂದ ಭವಿಷ್ಯದಲ್ಲಿ ದೊಡ್ಡ ಬೆಲೆ ಕಟ್ಟ ಬೇಕಾಗುತ್ತದೆ. ಆದರೆ, ಕೊರೊನಾ ನಿಯಂತ್ರಿಸುವುದು ಬಹಳ ಅಗತ್ಯವಾಗಿದೆ. ಮೂರು ವಾರಗಳವರೆಗೆ ಈ ಲಾಕ್‌ಡೌನ್‌ ಇರಲಿದ್ದು, ಸೋಂಕು ಪ್ರಕರಣಗಳಲ್ಲಿ ಇಳಿಕೆ ಕಂಡುಬಂದರೆ ಲಾಕ್‌ಡೌನ್‌ ನಿಯಮಗಳಲ್ಲಿ ಸಡಿಲಗೊಳಿಸುವ ಸಾಧ್ಯತೆಗಳಿವೆ’ ಎಂದುಬೆಂಜಮಿನ್‌ ನೆತನ್ಯಾಹು ಅವರು ಮಾಹಿತಿ ನೀಡಿದ್ದಾರೆ.

ಇಸ್ರೇಲ್‌ನಲ್ಲಿ 1.5 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1100 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT