ಶುಕ್ರವಾರ, ಜನವರಿ 22, 2021
21 °C

ಕೋವಿಡ್‌ ಲಸಿಕೆಯ 2ನೇ ಡೋಸ್‌ ಹಾಕಿಸಿಕೊಂಡ ಇಸ್ರೇಲ್‌ ಪ್ರಧಾನಿ

ಎಪಿ Updated:

ಅಕ್ಷರ ಗಾತ್ರ : | |

Prajavani

ಜೆರುಸಲೇಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶನಿವಾರ ಕೋವಿಡ್‌ ಲಸಿಕೆಯ ಎರಡನೇ ಡೋಸ್‌ ಹಾಕಿಸಿಕೊಂಡಿದ್ದಾರೆ.

‘ಈಗಾಗಲೇ ಇಸ್ರೇಲ್‌ನ ಶೇಕಡಾ 20 ರಷ್ಟು ಜನತೆಗೆ ಲಸಿಕೆಯ ಎರಡು ಡೋಸ್‌ ಅನ್ನು ನೀಡಲಾಗಿದೆ. ಮಾರ್ಚ್‌ ತಿಂಗಳೊಳಗೆ ದೇಶದ ಎ‌ಲ್ಲಾ ವಯಸ್ಕರಿಗೆ ಲಸಿಕೆಯ ಎರಡೂ ಡೋಸ್‌ಗಳನ್ನು ನೀಡಲಾಗುವುದು’ ಎಂದು ನೆತನ್ಯಾಹು ಅವರು ಶನಿವಾರ ತಿಳಿಸಿದರು.

ಸದ್ಯ ಇಸ್ರೇಲ್‌ನಲ್ಲಿ ಮೂರನೇ ಬಾರಿಗೆ ರಾಷ್ಟ್ರವ್ಯಾಪ್ತಿ ಲಾಕ್‌ಡೌನ್‌ ಹೇರಲಾಗಿದೆ. ಶಾಲಾ–ಕಾಲೇಜು ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ. ಅಗತ್ಯ ಇದ್ದಲ್ಲಿ ಮಾತ್ರ ಮನೆಯಿಂದ ಹೊರ ಬರುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು