ಮಂಗಳವಾರ, ಅಕ್ಟೋಬರ್ 27, 2020
24 °C

ಭ್ರಷ್ಟಾಚಾರ| ಇಸ್ರೇಲ್‌ ಪ್ರಧಾನಿ ರಾಜೀನಾಮೆಗೆ ಆಗ್ರಹಿಸಿ ಲಾಕ್‌ಡೌನ್‌ನಲ್ಲೂ ಹೋರಾಟ

ಎಪಿ Updated:

ಅಕ್ಷರ ಗಾತ್ರ : | |

ಟೆಲ್‌ ಅವೀವ್‌: ಭ್ರಷ್ಟಾಚಾರ ಆರೋಪ ಹೊತ್ತು ವಿಚಾರಣೆ ಎದುರಿಸುತ್ತಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ರಾಜೀನಾಮೆಗೆ ಒತ್ತಾಯಿಸಿ ಲಾಕ್‌ಡೌನ್‌ ನಡುವೆಯೂ ಇಸ್ರೇಲ್‌ ರಾಷ್ಟ್ರವ್ಯಾಪಿ ಲಕ್ಷಾಂತರ ಮಂದಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾ ಸ್ಫೋಟವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಎರಡನೇ ಬಾರಿಗೆ ಲಾಕ್‌ಡೌನ್‌ ಘೋಷಣೆ ಮಾಡಿದ ಪ್ರಧಾನಿ ವಿರುದ್ಧ ಕಿಡಿಕಾರಿರುವ ಪ್ರತಿಭಟನಾಕಾರರು, ‘ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ‘ ಎಂದು ಆರೋಪಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಪ್ರತಿ ವಾರ ಜರುಸೆಲೇಮ್‌ನಲ್ಲಿರುವ ನೆತನ್ಯಾಹು ಅವರ ಗೃಹ ಕಚೇರಿ ಹೊರಗೆ ಜಮಾಯಿಸುವ ಪ್ರತಿಭಟನಾಕಾರರು, ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.‌

ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಬಾರಿ ಇಸ್ರೇಲ್‌ನಲ್ಲಿ ಲಾಕ್‌ಡೌನ್ ನಿಯಮ ವಿಧಿಸಲಾಗಿದ್ದು, ಹೊಸ ನಿಯಮಗಳಿಗೆ ಅನುಸಾರವಾಗಿ, ದೇಶಾದ್ಯಂತ 1,000 ಕ್ಕೂ ಹೆಚ್ಚು ಪ್ರತಿಭಟನೆಗಳು ನಡೆದಿವೆ‘ ಎಂದು ಸಂಘಟಕರು ತಿಳಿಸಿದ್ದಾರೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಿದ ಪ್ರಧಾನಿ ಬೆಂಜಮಿನ್‌, ತಮ್ಮ ಗೃಹ ಕಚೇರಿಯ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲು ಅನಮತಿ ನೀಡಿದ್ದರು. ‘ಜನರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ‘ ಎಂದು ಬೆಂಜಮಿನ್ ಸಮರ್ಥನೆ ನೀಡಿದ್ದರು. ಆದರೆ ಪ್ರತಿಭಟನಾಕಾರರು ಮಾತ್ರ, ‘ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಡಲು ಹಾಗೂ ಚಳವಳಿ ಹತ್ತಿಕ್ಕಲು ಈ ರೀತಿ ನಿರ್ಬಂಧ ವಿಧಿಸಿದ್ದಾರೆ‘ ಎಂದು ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು