ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ಧ ತೀವ್ರ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ

ಜೆರುಸಲೇಂ: ಭ್ರಷ್ಟಾಚಾರ ಹಾಗೂ ಕೋವಿಡ್–19 ಪ್ರಸರಣ ನಿಯಂತ್ರಿಸುವಲ್ಲಿ ವೈಫಲ್ಯ ಆರೋಪ ಎದುರಿಸುತ್ತಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಸ್ರೇಲ್‌ನಲ್ಲಿ ಮತ್ತೆ ಪ್ರತಿಭಟನೆ ಆರಂಭಗೊಂಡಿದೆ.
ಕೋವಿಡ್–19 ಪ್ರಸರಣ ತಡೆಯಲು 3ನೇ ಬಾರಿ ಜಾರಿಗೊಳಿಸಿರುವ ಲಾಕ್‌ಡೌನ್ ಅನ್ನು ಲೆಕ್ಕಿಸದೇ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.
ಜೆರುಸಲೇಂ ಸ್ಕ್ವೇರ್ ಸಮೀಪ ಇರುವ ನೆತನ್ಯಾಹು ಗೃಹ ಕಚೇರಿ ಮುಂದೆ ಜಮಾಯಿಸಿದ್ದ ಪ್ರತಿಭಟನಕಾರರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಆರೋಪ ಎದುರಿಸುತ್ತಿರುವ ನೆತನ್ಯಾಹು ದೇಶವನ್ನು ಮುನ್ನಡೆಸಲಾರರು ಎಂದೂ ಪ್ರತಿಭಟನಕಾರರು ಹೇಳಿದ್ದಾರೆ.
ಲಂಚ ಪಡೆದಿರುವ, ವಂಚನೆ ಆರೋಪಗಳನ್ನು ನೆತನ್ಯಾಹು ಎದುರಿಸುತ್ತಿದ್ದಾರೆ. ಆದರೆ, ತಮ್ಮ ವಿರುದ್ಧ ಆರೋಪಗಳನ್ನು ತಳ್ಳಿ ಹಾಕಿರುವ ಅವರು, ‘ಮಾಧ್ಯಮಗಳು, ಕಾನೂನು ಜಾರಿ ಸಂಸ್ಥೆಗಳು ಹಾಗೂ ನ್ಯಾಯಾಂಗದ ಅಧಿಕಾರಿಗಳ ಪಿತೂರಿಯ ಬಲಿಪಶು ನಾನು’ ಎಂದಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.