ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ತಾಂಬುಲ್‌ನಲ್ಲಿ ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; ಶಂಕಿತ ವಶಕ್ಕೆ 

Last Updated 14 ನವೆಂಬರ್ 2022, 3:06 IST
ಅಕ್ಷರ ಗಾತ್ರ

ಇಸ್ತಾಂಬುಲ್‌ (ಎಪಿ):ಟರ್ಕಿಯ ಇಸ್ತಾಂಬುಲ್‌ನ ಜನಪ್ರಿಯ ಪಾದಚಾರಿ ಮಾರ್ಗವಾದ ಇಸ್ತಿಕಾಲ್‌ ಅವೆನ್ಯೂದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ38 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ತಾಂಬುಲ್‌ ಗವ‌ರ್ನರ್ ಅಲಿ ಯರ್ಲಿಕಾಯಾ ಟ್ವೀಟ್‌ ‌ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಪೊಲೀಸರು ಬಂಧಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಟರ್ಕಿ ಸರ್ಕಾರದ ವಕ್ತಾರರು ಹೇಳಿದ್ದಾರೆ.

ಇಸ್ತಿಕಾಲ್ ಅವೆನ್ಯೂದಲ್ಲಿ ರೆಸ್ಟೋರೆಂಟ್‌, ಅಂಗಡಿಗಳಿದೆ. ಇದು ಹೆಚ್ಚಿನ ಪ್ರವಾಸಿಗರು, ಸ್ಥಳೀಯರಿಂದ ಕಿಕ್ಕಿರಿದ ರಸ್ತೆಯಾಗಿದೆ. ಭಾನುವಾರ ಸಂಜೆ ಸುಮಾರು 4.30ಕ್ಕೆ ಸ್ಫೋಟ ಸಂಭವಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಸ್ಫೋಟದ ನಂತರದ ಹಾಗೂ ರಕ್ಷಣಾ ಕಾರ್ಯದ ವಿಡಿಯೊ ತುಣುಕುಗಳು ಹರಿದಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT