ಭಾನುವಾರ, ಅಕ್ಟೋಬರ್ 24, 2021
23 °C

ಕಾಬೂಲ್‌ ಡ್ರೋನ್ ದಾಳಿಯಲ್ಲಿ ನಾಗರಿಕರ ಹತ್ಯೆ; ತಪ್ಪೊಪ್ಪಿಕೊಂಡ ಅಮೆರಿಕ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಅಫ್ಗಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಐಸಿಸ್ ಖುರಾಸನ್ (ISIS-K) ಉಗ್ರರನ್ನು ಗುರಿಯಾಗಿಸಿ ಅಮೆರಿಕ ನಡೆಸಿರುವ ಪ್ರತಿದಾಳಿಯಲ್ಲಿ ಅಮಾಯಕ ನಾಗರಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಅಮೆರಿಕ ತಪ್ಪೊಪ್ಪಿಕೊಂಡಿದೆ.

ಅಮೆರಿಕ ಸೆಂಟ್ರಲ್ ಕಮಾಂಡ್‌‍ನ ಕಮಾಂಡರ್ ಜನರಲ್ ಫ್ರಾಂಕ್ ಮೆಕೆಂಜಿ ಈ ಕುರಿತು ತಪ್ಪೊಪ್ಪಿಕೊಂಡಿದ್ದು, ಕ್ಷಮೆಯಾಚಿಸಿದ್ದಾರೆ. ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಏಳು ಮಕ್ಕಳು ಸೇರಿದಂತೆ 10 ನಾಗರಿಕರು ಮೃತಪಟ್ಟಿದ್ದರು.

ಇದನ್ನೂ ಓದಿ: 

ಕಾಬೂಲ್‌ನ ಹಮೀದ್‌ ಕರ್ಝಾಯಿ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಅಮೆರಿಕದ 13 ಯೋಧರು ಸೇರಿದಂತೆ 100ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದರು.

'ಸಂಪೂರ್ಣವಾಗಿ ತನಿಖೆ ನಡೆಸಿದ ಬಳಿಕ ಡ್ರೋನ್ ದಾಳಿಯಲ್ಲಿ ಮಕ್ಕಳು ಸೇರಿದಂತೆ 10 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಇದು ನಮ್ಮಿಂದಾಗಿರುವ ತಪ್ಪಾಗಿದೆ. ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಓರ್ವ ಕಮಾಂಡರ್ ಆಗಿ ಈ ದಾಳಿಯ ದುರಂತದ ಸಂಪೂರ್ಣ ಹೊಣೆಯನ್ನು ಹೊತ್ತುಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.

ಅಫ್ಗಾನಿಸ್ತಾನದಿಂದ ಅಮೆರಿಕ ಸೇನೆ ನಿರ್ಗಮನದ ಅಂತಿಮ ಹಂತದಲ್ಲಿ ದಾಳಿ ನಡೆದಿತ್ತು. ವಿಮಾನ ನಿಲ್ದಾಣದಲ್ಲಿ ಅಮೆರಿಕ ಸೇನೆಯ ವಿರುದ್ಧ ಇಸ್ಲಾಮಿಕ್ ಸ್ಟೇಟ್‌ ಉಗ್ರರಿಂದ ಎದುರಾಗಬಹುದಾಗಿದ್ದ ಮತ್ತಷ್ಟು ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರತಿದಾಳಿ ನಡೆಸಲಾಗಿತ್ತು ಎಂದು ಪೆಂಟಗನ್ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು